ಕ್ರೀಡೆ

ನಾಳೆ ಪಾಕ್ ಸಂಭಾವನಿಯರ ಪಟ್ಟಿ

Published On :

ಲಾಹೋರ್: ಜೂನ್‌ನಲ್ಲಿ ಆರಂಭವಾಗಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ ಹಿನ್ನಲೆಯಲ್ಲಿ ಮಾ.29ರಂದು ಪಾಕಿಸ್ತಾನ ಆಯ್ಕೆ ಮಂಡಳಿ ಸಭೆ ನಡೆಯಲಿದ್ದು, ಸಂಭಾವನಿಯ ಆಟಗಾರರ ಪಟ್ಟಿಯನ್ನು ಆಯ್ಕೆ ಮಾಡಲಿದೆ.ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಗೆ ಭಾಗವಹಿಸಲಿರುವ ರಾಷ್ಟ್ರಗಳು ಏ.4ರ ಒಳಗಾಗಿ ತಮ್ಮ ತಂಡದ 30 ಆಟಗಾರರ ಸಂಭಾವನಿಯರ ಪಟ್ಟಿಯನ್ನು ಸಲ್ಲಿಸಬೇಕಿದ್ದು, ಈ ಹಿನ್ನಲೆಯಲ್ಲಿ ಸಂಭಾವನಿಯ ಆಟಗಾರರ ಪಟ್ಟಿಯನ್ನು ನೀಡುವಂತೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ, ಪಾಕಿಸ್ತಾನ ಆಯ್ಕೆ ಸಮಿತಿಯ ಅಧ್ಯಕ್ಷರಾಗಿರುವ ಇಕ್ಬಾಲ್ ಕಾಸಿಂ ಅವರಿಗೆ ತಿಳಿಸಿದೆ. ಹಾಗೂ ಪಂದ್ಯಾವಳಿಗೆ ಅಂತಿಮ ತಂಡವನ್ನು ಮೇ.15ರ ಒಳಗಾಗಿ ನೀಡಬೇಕಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.