ರಾಸ್ ಟೇಲರ್ ಅಸಮಾಧಾನ

ವೆಲ್ಲಿಂಗ್ಟನ್: ಕಳೆದ ವರ್ಷಾಂತ್ಯದಲ್ಲಿ ನ್ಯೂಜಿಲೆಂಡ್ ತಂಡದ ನಾಯಕತ್ವದಿಂದ ಕೆಳಗಿಳಿದ ರಾಸ್ ಟೇಲರ್, ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನು ಡ್ರಾ ಮಾಡಿಕೊಂಡ ರೀತಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ತಮ್ಮ ನಾಯಕತ್ವವನ್ನು ಬ್ರೆಂಡನ್ ಮೆಕಲಂ ಅವರಿಗೆ ಬಿಟ್ಟುಕೊಡಲು ಹಲವು ಕಾರಣಗಳಿರುವ ಬಗ್ಗೆ ಸುಳಿವು ನೀಡಿದರು. ನಾನು ತಂಡದಲ್ಲಿ ಅಂದುಕೊಂಡ ರೀತಿಯಲ್ಲಿ ಸಂತಸವಾಗಿಲ್ಲ, ಈ ಬಗ್ಗೆ ಕಾಲವೇ ಉತ್ತರ ನೀಡಲಿದೆ ಎಂದು ತಿಳಿಸಿದರು. ತಂಡದಲ್ಲಿ ಸಾಕಷ್ಟು ಘಟನೆಗಳು ನಡೆದಿದೆ ಈ ಎಲ್ಲಾ ಘಟನೆಗಳ ಬಗ್ಗೆ ಮುಂದಿನ ಎರಡು ವಾರ ಅಥವಾ ತಿಂಗಳಲ್ಲಿ ತಿಳಿಯಲಿದ್ದು, ಈಗ ಈ ವಿಷಯದ ಬಗ್ಗೆ ಮಾತನಾಡುವುದು ಸೂಕ್ತವಲ್ಲ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


