ವಿದೇಶಗಳಲ್ಲಿ ಗೆಲ್ಲುವುದು ಮುಖ್ಯ: ಗಂಭೀರ್

Updated on: 

ನವದೆಹಲಿ: ಇತ್ತೀಚೆಗೆ ತವರಿನಲ್ಲಿ ಆಸ್ಟ್ರೇಲಿಯಾ ತಂಡದ ವಿರುದ್ಧ 4-0 ಅಂತರದಲ್ಲಿ ಟೆಸ್ಟ್ ಸರಣಿಯನ್ನು ಗೆದ್ದ ಸಂಭ್ರಮದಲ್ಲಿ ಭಾರತ ತಂಡ ತೇಲುತ್ತಿದ್ದರೆ, ಇತ್ತ ಸರಣಿಯಲ್ಲಿ ಭಾರತ ತಂಡದಿಂದ ಹೊರಗುಳಿದಿದ್ದ ಆರಂಭಿಕ ಬ್ಯಾಟ್ಸ್‌ಮನ್ ಗೌತಮ್ ಗಂಭೀರ್ ವಿದೇಶಗಳಲ್ಲಿ ಟೆಸ್ಟ್ ಸರಣಿಯನ್ನು ಗೆಲ್ಲುವುದು ಮುಖ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.
ವಿದೇಶಗಳಲ್ಲಿ ಟೆಸ್ಟ್ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡದ ಹೊರತಾಗಿ ಯಾವುದೇ ತಂಡ ವಿಶ್ವ ಕ್ರಿಕೆಟ್‌ನಲ್ಲಿ ಪ್ರಬಲ ತಂಡವಾಗಿ ಬಿಂಬಿತವಾಗಲು ಸಾಧ್ಯವಿಲ್ಲ. ಹಾಗಾಗಿ ನನ್ನ ಪ್ರಕಾರ ವಿದೇಶಗಳಲ್ಲಿ ಟೆಸ್ಟ್ ಸರಣಿ ಗೆಲ್ಲುವುದು ಅತಿ ಮುಖ್ಯ. ಅದೇರೀತಿ ತವರಿನಲ್ಲಿ ತಮ್ಮ ಲಾಭವನ್ನು ಪಡೆದುಕೊಳ್ಳುವುದು ತಪ್ಪಲ್ಲ ಎಂದು ಗಂಭೀರ್ ತಿಳಿಸಿದ್ದಾರೆ.
ದಕ್ಷಿಣ ಆಫ್ರಿಕಾ ತಂಡ ಆಸ್ಟ್ರೇಲಿಯಾದಲ್ಲಿ ಆಸೀಸ್ ತಂಡವನ್ನು, ಇಂಗ್ಲೆಂಡ್‌ನಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸುವ ಮೂಲಕ ನಂ.1 ಪಟ್ಟಕ್ಕೇರಿದ್ದು, ದಕ್ಷಿಣ ಆಫ್ರಿಕಾ ತಂಡ ನಿಜವಾದ ಟೆಸ್ಟ್ ಬಲಿಷ್ಠ ತಂಡ ಎಂದು ಗಂಭೀರ್ ಹೇಳಿದರು.
ವಿದೇಶದ ಪ್ರವಾಸದಲ್ಲಿ ಉತ್ತಮ ರನ್‌ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸುವುದು ನನ್ನ ಗುರಿಯಾಗಿದೆ. ಮುಂದಿನ ದಿನಗಳಲ್ಲಿ ಭಾರತ 'ಎ' ತಂಡ ದಕ್ಷಿಣ ಆಫ್ರಿಕಾ ಪ್ರವಾಸ ಮಾಡಲಿದ್ದು, ಈ ಪ್ರವಾಸದ ಫಲಿತಾಂಶದಿಂದ ಭಾರತ ರಾಷ್ಟ್ರೀಯ ತಂಡ ದಕ್ಷಿಣ ಆಫ್ರಿಕಾಗೆ ಪ್ರವಾಸ ಕೈಗೊಂಡಾಗ ಯಾವ ರೀತಿಯ ಫಲಿತಾಂಶವನ್ನು ನಿರೀಕ್ಷಿಸಬಹುದು ಎಂಬ ಚಿತ್ರಣ ಸಿಗುತ್ತದೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com