ನಾಯಕತ್ವ ಪ್ರದರ್ಶನಕ್ಕೆ ಅಡ್ಡಿಯಾಗಲ್ಲ: ಸೆಹ್ವಾಗ್
ನವದೆಹಲಿ: ಕಳೆದ ಐಪಿಎಲ್ನಲ್ಲಿ ಡೆಲ್ಲಿ ಡೇರ್ಡೆವಿಲ್ಸ್ ತಂಡದ ನಾಯಕತ್ವವನ್ನು ತ್ಯಜಿಸಿದ ವೀರೇಂದ್ರ ಸೆಹ್ವಾಗ್, ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ಕಳೆದ ಐಪಿಎಲ್ನಲ್ಲಿನ ನಿರ್ಧಾರದಿಂದ ನನ್ನ ಪ್ರದರ್ಶನದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಸೆಹ್ವಾಗ್ ತಿಳಿಸಿದ್ದಾರೆ. ನಾನು ತಂಡದ ನಾಯಕತ್ವದ ಬಗ್ಗೆ ಹೆಚ್ಚು ಚಿಂತಿಸುವುದಿಲ್ಲ. ನಾಯಕತ್ವ ನನ್ನ ಪ್ರದರ್ಶನದ ಮೇಲೆ ಪರಿಣಾಮ ಬೀರುವುದಿಲ್ಲ. ತಂಡವನ್ನು ಮುನ್ನಡೆಸುವಾಗ ನಾನು ಎಂದಿಗೂ ಬ್ಯಾಟಿಂಗ್ನಲ್ಲಿ ಒತ್ತಡಕ್ಕೆ ಸಿಲುಕಿಲ್ಲ ಎಂದು ವೀರೂ ತಿಳಿಸಿದ್ದಾರೆ. ತಂಡದ ನಾಯಕನಾಗಿಯೂ ನಾನು ಎಂದಿಗೂ ಒತ್ತಡಕ್ಕೆ ಸಿಲುಕಿಲ್ಲ, ಪಂದ್ಯದಲ್ಲಿ ನನ್ನ ಆಟದ ಶೈಲಿ ಯಾವಾಗಲೂ ಒಂದೇ ರೀತಿ ಇರುತ್ತದೆ. ನಾನು ನನ್ನ ಪ್ರದರ್ಶನ ಹಾಗೂ ನಾಯಕತ್ವವನ್ನು ಎಂದಿಗೂ ಬೆರೆಸುವುದಿಲ್ಲ ಎರಡೂ ಅಂಶವನ್ನು ಭಿನ್ನವಾಗಿ ನಿಭಾಯಿಸುತ್ತೇನೆ ಎಂದು ತಿಳಿಸಿದರು.
ಇನ್ನು ಡೆಲ್ಲಿ ತಂಡದ ಪ್ರಮುಖ ಆಟಗಾರ ಕೆವಿನ್ ಪೀಟರ್ಸನ್ ಅವರು ಗಾಯದ ಸಮಸ್ಯೆಯಿಂದ ಹೊರಗುಳಿದಿರುವುದು ತಂಡಕ್ಕೆ ನಷ್ಟವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಪೀಟರ್ಸನ್ ಉತ್ತಮ ಆಟಗಾರನಾಗಿದ್ದು ಈ ಬಾರಿ ಅಲಭ್ಯರಾಗಿರುವುದು ತಂಡಕ್ಕೆ ನಷ್ಟವಾಗಿದೆ. ಆದರೆ ತಂಡದಲ್ಲಿ ಪ್ರಮುಖ ಆಟಗಾರರಿದ್ದು ತಂಡಕ್ಕೆ ಉತ್ತಮ ಕೊಡುಗೆ ನೀಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

