ವಿನಯ್ ಕುಮಾರ್ ಮಿಶ್ರಾಗೆ ಸ್ಥಾನ ಸಾಧ್ಯತೆ
ಮುಂಬೈ: ಮುಂದಿನ ತಿಂಗಳು ನಡೆಯಲಿರುವ ಪ್ರತಿಷ್ಠಿತ ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡವನ್ನು ಶನಿವಾರ ಆಯ್ಕೆ ಸಮಿತಿಯು ಆಯ್ಕೆ ಮಾಡಲಾಗುವುದು. ಹಾಗಾಗಿ ಅಂತಿಮ 15ರ ಆಟಗಾರರ ಪಟ್ಟಿಯಲ್ಲಿ ಯಾರು ಸ್ಥಾನ ಪಡೆಯಲಿದ್ದಾರೆ ಎಂದು ಕಾದುನೋಡಬೇಕಿದೆ.
ಇಂದು ಸಂದೀಪ್ ಪಾಟೀಲ್ ನೇತೃತ್ವದಲ್ಲಿ ಆಯ್ಕೆ ಸಮಿತಿ ಸಭೆ ನಡೆಯಲಿದ್ದು, ಈ ವೇಳೆ ತಂಡವನ್ನು ಆಯ್ಕೆ ಮಾಡಲಾಗುವುದು. ಈ ಬಾರಿಯ ಐಪಿಎಲ್ನಲ್ಲಿ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿರುವ ಅಮಿತ್ ಮಿಶ್ರಾ ಹಾಗೂ ಕರ್ನಾಟಕದ ವಿನಯ್ ಕುಮಾರ್ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆಗಳು ಹೆಚ್ಚಾಗಿದೆ.
ಐಪಿಎಲ್ನಲ್ಲಿ ಪರಿಣಾಮಕಾರಿಯಾಗಿ ಬೌಲಿಂಗ್ ಮಾಡಿರುವ ವಿನಯ್ ಕುಮಾರ್, ಭುವನೇಶ್ವರ್ ಕುಮಾರ್, ಉಮೇಶ್ ಯಾದವ್ ಜತೆಗೆ ಇಶಾಂತ್ ಶರ್ಮಾ ಸ್ಥಾನ ಪಡೆಯುವ ಸಾಧ್ಯತೆಗಳಿವೆ. ಇವರ ಜತೆಗೆ ವೇಗದ ಆಲ್ರೌಂಡರ್ ಸ್ಥಾನವನ್ನು ತುಂಬಲು ಇರ್ಫಾನ್ ಪಠಾಣ್ ಆಯ್ಕೆ ಮಾಡುವ ಸಾಧ್ಯತೆಗಳಿವೆ.
ಐಸಿಸಿ ನಿಯಮದ ಪ್ರಕಾರ ಏಕದಿನ ಕ್ರಿಕೆಟ್ನಲ್ಲಿ ಸಂಭಾವ್ಯರ ಪಟ್ಟಿಯಲ್ಲಿನ ಆಟಗಾರರ ಹೊರತಾಗಿ ಅಂತಿಮ ಪಟ್ಟಿಯಲ್ಲಿ ಹೊಸ ಆಟಗಾರರ ಹೆಸರನ್ನು ಸೇರಿಸುವ ಅವಕಾಶ ನೀಡಲಾಗಿದೆ. ಹಾಗಾಗಿ ಮುರಳಿ ವಿಜಯ್, ಶಿಖರ್ ಧವನ್, ಗಂಭೀರ್, ಉನ್ಮುಕ್ತ್ ಚಾಂದ್ ಅವರೊಂದಿಗೆ ಸೆಹ್ವಾಗ್ ಅಂತಿಮ ಪಟ್ಟಿಯಲ್ಲಿ ಸ್ಥಾನಪಡೆಯುವರೆ ಎಂಬ ಪ್ರಶ್ನೆ ಉದ್ಭವಿಸಿದೆ.
ಇನ್ನು ಸ್ಪಿನ್ ವಿಭಾಗದಲ್ಲಿ ಆರ್.ಅಶ್ವಿನ್, ಅಮಿತ್ ಮಿಶ್ರಾ, ರವೀಂದ್ರ ಜಡೇಜಾ, ಜಲಜ್ ಸಕ್ಸೇನಾ, ಪ್ರರ್ವೆಜ್ ರಸೂಲ್ ಅವರು ಸಂಭಾವ್ಯರ ಪಟ್ಟಿಯಲ್ಲಿದ್ದು, ಇವರೊಂದಿಗೆ ಭಜ್ಜಿ ಸ್ಥಾನ ಪಡೆಯುವರೆ ಎಂಬುದು ಕುತೂಹಲಕಾರಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

