ಕ್ರೀಡೆ

ಟೇಬಲ್ ಟೆನಿಸ್: ಪಾಕ್‌ಗೆ ಪ್ರವೇಶವಿಲ್ಲ

Published On :

ನವದೆಹಲಿ: ಪಾಕಿಸ್ತಾನದ ಟೇಬಲ್ ಟೆನಿಸ್ ಆಟಗಾರರಿಗೆ ಭಾರತದ ಅಧಿಕಾರಿಗಳು ವೀಸಾ ನೀಡದ ಹಿನ್ನಲೆಯಲ್ಲಿ ಪಾಕಿಸ್ತಾನದ ಯಾವುದೇ ಆಟಗಾರರು ಮೆ5 ರಿಂದ ನಡೆಯಲಿರುವ ಕಾಮನ್ವೆಲ್ತ್ ಟೇಬಲ್ ಟೆನಿಸ್ ಚಾಂಪಿಯನ್‌ಷಿಪ್‌ನಲ್ಲಿ ಭಾಗವಹಿಸುತ್ತಿಲ್ಲ. ನಾವು ಈ ಪಂದ್ಯಾವಳಿಯಲ್ಲಿ ಭಾಗವಹಿಸಲು ಇಚ್ಛಿಸಿದ ಎಲ್ಲಾ ದೇಶಗಳ ಆಟಗಾರರಿಗೂ ವಿಸಾ ನೀಡಲು ಅನುಮತಿ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೆವು. ಆದರೆ ಪಾಕಿಸ್ತಾನ ಆಟಗಾರರಿಗೆ ಭಾರತ ಸರ್ಕಾರ ವೀಸಾ ಅನುಮತಿ ನೀಡದ ಹಿನ್ನಲೆಯಲ್ಲಿ ಪಾಕಿಸ್ತಾನದ ಆಟಗಾರರು ಭಾಗವಹಿಸುತ್ತಿಲ್ಲ ಎಂದು ಭಾರತೀಯ ಟೇಬಲ್ ಟೆನಿಸ್ ಅಸೋಸಿಯೇಷನ್‌ನ ಅಧ್ಯಕ್ಷ ಪಿ.ಸಿ ಚತುರ್ವೇದಿ ತಿಳಿಸಿದರು. ಕಳೆದ ಮಾರ್ಚ್‌ನಲ್ಲಿ ನಡೆದ ಏಷ್ಯನ್ ಸೈಕ್ಲಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಪಾಕಿಸ್ತಾನದ ಸೈಕ್ಲಿಸ್ಟ್‌ಗಳು ವೀಸಾ ಪಡೆಯಲು ಸಾಕಷ್ಟು ಶ್ರಮವಹಿಸಿದರು ಅಲ್ಲದೆ ಕೆಲವು ಸೈಕ್ಲಿಸ್ಟ್‌ಗಳು ಪಂದ್ಯಾವಳಿಯಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.