ಚೀನೀಯರನ್ನುಗೆಲ್ಲುವುದೇನೂ ಕಷ್ಟವಲ್ಲ: ಸಿಂಧು
ಹೈದರಾಬಾದ್: 'ಬ್ಯಾಡ್ಮಿಂಟನ್ ಲೋಕದಲ್ಲಿ ಚೀನೀಯರು ಗಟ್ಟಿಗರು. ಅಗಾಧ ಪ್ರತಿಭೆಯಿಂದ ವಿಶ್ವಮಟ್ಟದಲ್ಲಿ ಅವರೇ ನಂಬರ್‌ಒನ್ ಸ್ಥಾನದಲ್ಲಿದ್ದಾರೆ. ಆದರೆ, ಅವರನ್ನು ಗೆಲ್ಲುವುದು ಕಷ್ಟವೇನಲ್ಲ' ಎಂದು ಭಾರತೀಯ ಬ್ಯಾಡ್ಮಿಂಟನ್ ಲೋಕದ ಹೊಸ ತಾರೆಯಾಗಿ ಹೊರಹೊಮ್ಮಿರುವ ಪಿ.ವಿ. ಸಿಂಧು ತಿಳಿಸಿದರು. ಇತ್ತೀಚೆಗೆ ನಡೆದ ಮಲೇಷ್ಯಾ ಗ್ರ್ಯಾಂಡ್ ಪ್ರೀ ಬ್ಯಾಡ್ಮಿಂಟನ್ ಪಂದ್ಯಾವಳಿಯ ಫೈನಲ್‌ನಲ್ಲಿ ಅವರು ಚೀನಾದ ಆಟಗಾರ್ತಿ ಹಾಗೂ ಒಲಿಂಪಿಕ್ಸ್ ಚಾಂಪಿಯನ್ ಲಿ ಕ್ಸುಯೆರುಯ್ ಅವರನ್ನು ಮಣಿಸಿ ತಮ್ಮ ವೃತ್ತಿಜೀವನದಲ್ಲಿ ಮೊಟ್ಟ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಪಂದ್ಯಾವಳಿಯನ್ನು ಗೆದ್ದಿದ್ದರು. ಇದೇ ಸಂಭ್ರಮದಲ್ಲಿರುವ ಸಿಂಧು, ಮಂಗಳವಾರ ತಮ್ಮ ಮನದ ಮಾತುಗಳಿಗೆ ದನಿಯಾದರು. 'ಚೀನಾದ ಆಟಗಾರರು ಶ್ರೇಷ್ಠ ಆಟಗಾರರಾಗಿದ್ದರೂ, ಯಾರು ಅವರ ಎದುರಾಳಿಗಳಾಗಿ ಕಣಕ್ಕಿಳಿಯುತ್ತಾರೋ, ಅವರು ನಿರ್ದಿಷ್ಟ ಪಂದ್ಯವೊಂದರಲ್ಲಿ ಚೀನಾ ಆಟಗಾರರಿಗಿಂತಲೂ ಶ್ರೇಷ್ಠ ಪ್ರದರ್ಶನ ನೀಡಿದ್ದೇ ಆದಲ್ಲಿ ಜಯ ಗಳಿಸುವುದು ಸುಲಭ' ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

