ಕ್ರೀಡೆ

ವಿಶ್ವ ಟೇಬಲ್ ಟೆನಿಸ್ ಚಾಂಪಿಯನ್‌ಷಿಪ್‌ಗೆ ತೆರಳಿದ ಭಾರತ

Published On :

ನವದೆಹಲಿ: ರಾಜಧಾನಿಯಲ್ಲಿ ನಡೆದ ಕಾಮನ್ವೆಲ್ತ್ ಟೇಬಲ್ ಟೆನಿಸ್ ಚಾಂಪಿಯನ್‌ಷಿಪ್‌ನಲ್ಲಿ ದಾಖಲೆಯ ಪ್ರದರ್ಶನ ನೀಡಿದ 9 ಸದಸ್ಯರ ಭಾರತ ತಂಡ, ವಿಶ್ವ ಚಾಂಪಿಯ್‌ಷಿಪ್‌ನಲ್ಲಿ ಭಾಗವಹಿಸಲು ಪ್ಯಾರೀಸ್‌ಗೆ ತೆರಳಿತು. ಸೋಮವಾರದಿಂದ ಪಂದ್ಯಾವಳಿ ಆರಂಭವಾಗಲಿದ್ದು, ಭಾರತದ 5 ಪುರುಷರು ಮತ್ತು ನಾಲ್ವರು ವನಿತೆಯರು ಪ್ರಶಸ್ತಿಗಾಗಿ ಸೆಣಸಲಿದ್ದಾರೆ. ಪುರುಷರ ತಂಡದ ಮುದಾಳತ್ವವನ್ನು ಅಚಂತಾ ಶರತ್ ಕಮಲ್ ವಹಿಸಿಕೊಂಡಿದ್ದರೆ, ಮೌಮಾ ದಾಸ್ ವನಿತೆಯರ ತಂಡದ ಮುಂದಾಳತ್ವ ವಹಿಸಲಿದ್ದಾರೆ. ಮಹಿಳೆಯರ ರಾಷ್ಟ್ರೀಯ ಚಾಂಪಿಯನ್‌ಷಿಪ್‌ನಲ್ಲಿ ಪ್ರಶಸ್ತಿ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುವ ಕೆ. ಶ್ಯಾಮಿನಿ ಸಹ ತಂಡಲ್ಲಿದ್ದಾರೆ. ಕಾನ್ವೆಲ್ತ್‌ನಲ್ಲಿ 2 ಬೆಳ್ಳಿ ಮತ್ತು ಏಳು ಕಂಚಿನ ಪದಕ ಗೆಲ್ಲುವ ಮೂಲಕ ಇದೇ ಮೊದಲ ಬಾರಿಗೆ ಶ್ರೇಷ್ಠ ಪ್ರದರ್ಶನ ನೀಡಿದ ಭಾರತ ತಂಡ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಪ್ರಶಸ್ತಿ ಗೆಲ್ಲುವ ಭರವಸೆ ಮೂಡಿಸಿದೆ.
ತಂಡ: ಅಚಂತ ಶರತ್ ಕಮಲ್, ಸೌಮ್ಯಜೀತ್ ಘೋಷ್, ಅಂಥೋನಿ ಅಮಲ್‌ರಾಜ್, ಸನಲ್ ಶೆಟ್ಟಿ, ಹರ್ಮೀತ್ ದೇಸಾಯಿ. ವನಿತೆಯರ ತಂಡ: ಮೌಮಾ ದಾಸ್, ಕೆ. ಶ್ಯಾಮಿನಿ, ಮಾಧುರಿಕಾ ಪಾಟ್ಕರ್, ನೆಹಾ ಅಗರ್ವಾಲ್.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.