ಫುಟ್ಬಾಲ್: ಜೂಪಿಟರ್ಗೆ ಜಯ
ಬೆಂಗಳೂರು: ನಗರದ ಫುಟ್ಬಾಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಿ ಡಿವಿಷನ್ ಫುಟ್ಬಾಲ್ ಪಂದ್ಯಾವಳಿಯ ಸೋಮವಾರದ ಪಂದ್ಯದಲ್ಲಿ ಜುಪಿಟರ್ ತಂಡವು ಸರ್ಕಾರಿ ಮುದ್ರಣಾಲಯ ತಂಡದ ವಿರುದ್ಧ 3-0 ಗೋಲುಗಳ ಅಂತರದಲ್ಲಿ ಜಯ ಸಾಧಿಸಿದೆ. ಆರಂಭದಿಂದಲೂ ಆಕ್ರಮಣಕಾರಿ ಆಟಪ್ರದರ್ಶಿಸಿದ ಜ್ಯೂಪಿಟರ್ ತಂಡದ ಪರ ಮುಗಿಲನ್ 13ನೇ ನಿಮಿಷದಲ್ಲಿ ಗೋಲು ಗಳಿಸುವ ಮೂಲಕ ತಂಡಕ್ಕೆ ಆರಂಭಿಕ ಮುನ್ನಡೆ ತಂದುಕೊಟ್ಟರು. ನಂತರ ಸನತ್ 26 ಹಾಗೂ 49ನೇ ನಿಮಿಷದಲ್ಲಿ ಗೋಲು ದಾಖಲಿಸಿ ತಂಡದ ಗೆಲವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಇದಕ್ಕು ಮೊದಲು ನಡೆದ ಪಂದ್ಯದಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ತಂಡವು ಆಗ್ನೇಯ ವಲಯ ರೈಲ್ವೆ ತಂಡದ ವಿರುದ್ಧ 5-0 ಅಂತರದ ಭರ್ಜರಿ ಜಯ ಸಾಧಿಸಿದೆ. ರಿಸರ್ವ್ ಬ್ಯಾಂಕ್ ತಂಡದ ಪರ ಕ್ಲಿಂಟನ್ 6 ಮತ್ತು 17ನೇ, ಉಮಾಶಂಕರ್ 50ನೇ, ಜಯಸೇಲನ್ 51ನೇ, ರಾಕೇಶ್ 70ನೇ ನಿಮಿಷದಲ್ಲಿ ಗೋಲು ದಾಖಲಿಸಿ ಗಮನ ಸೆಳೆದರು. ಇನ್ನು ಮಂಗಳವಾರ ಎರಡು ಪಂದ್ಯಗಳು ನಡೆಯಲಿದ್ದು, 2 ಗಂಟೆಗೆ ಆರಂಭವಾಗುವ ಮೊದಲ ಪಂದ್ಯದಲ್ಲಿ ಗಜಾನನ ಹಾಗೂ ಸದರ್ನ್ ಬ್ಲೂಸ್ ನಡುವೆ ನಡೆಯಲಿದೆ. ಇನ್ನು 4 ಗಂಟೆಗೆ ಆರಂಭವಾಗಲಿರುವ 2ನೇ ಪಂದ್ಯದಲ್ಲಿ ಧರ್ಮರಾಜ್ ಯೂನಿಯನ್ ಹಾಗೂ ಓರಿಯೆಂಟಲ್ ತಂಡಗಳು ಸೆಣೆಸಾಡಲಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

