ಸುದ್ದಿ ಸಂಕ್ಷೇಪ
ಬೈಕ್ ರೇಸ್: ಧೋನಿ ತಂಡಕ್ಕೆ ನಿರಾಸೆ
ನವದೆಹಲಿ: ಇಟಲಿಯ ಮೊನ್ಝಾದಲ್ಲಿ ಏರ್ಪಾಟಾಗಿದ್ದ ಮೋಟಾರ್ ಬೈಕ್ ರೇಸ್ನಲ್ಲಿ ಭಾಗವಹಿಸಿದ್ದ ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ತಂಡ ರೇಸ್ನಿಂದ ಹಿಂದೆ ಸರಿದಿದೆ. ಪ್ರತಿಕೂಲ ಹವಾಮಾನ ಹಿನ್ನೆಲೆಯಲ್ಲಿ, ರೇಸ್ ಆರಂಭವಾದ ನಂತರ, ನಾಲ್ಕನೇ ಲ್ಯಾಪ್ನಲ್ಲಿ ಸಾಗುತ್ತಿದ್ದ ತಂಡದ ಕ್ರೀಡಾಳುಗಳಾದ ಕೆನನ್ ಸೊಫೌಗ್ಲು ಹಾಗೂ ಫ್ಯಾಬಿನ್ ಫಾರೆಟ್ ಅವರು ರೇಸ್ನಿಂದ ಹಿಂದೆ ಸರಿಯಲು ನಿರ್ಧರಿಸಿದರು. ಇದರಿಂದಾಗಿ, ರೇಸ್ನಲ್ಲಿ ಉತ್ತಮ ಫಲಿತಾಂಶ ನೀಡುವ ನಿರೀಕ್ಷೆ ಹುಸಿಯಾದಂತಾಗಿದೆ.
ಭಾರತ ರತ್ನಕ್ಕೆ ಬಿಂದ್ರಾ ಹೆಸರು
ನವದೆಹಲಿ: ಒಲಿಂಪಿಕ್ಸ್ನ ವಯಕ್ತಿಕ ವಿಭಾಗದಲ್ಲಿ ಮೊದಲ ಚಿನ್ನದ ಪದಕ ಗೆದ್ದಿರುವ ಶೂಟರ್ ಅಭಿನವ್ ಬಿಂದ್ರಾ ಅವರ ಹೆಸರನ್ನು ಭಾರತ ರಾಷ್ಟ್ರೀಯ ರೈಫಲ್ ಸಂಸ್ಥೆ, ಭಾರತದ ಉನ್ನತ ನಾಗರೀಕ ಪ್ರಶಸ್ತಿ ಎಂದೇ ಖ್ಯಾತಿಯಾಗಿರುವ ಭಾರತ ರತ್ನ ಪ್ರಶಸ್ತಿಗೆ ಶಿಫಾರಸ್ಸು ಮಾಡಿದೆ. ಅಭಿನವ್ ಬಿಂದ್ರಾ ಅವರ ಒಲಿಂಪಿಕ್ಸ್ನ ವಯಕ್ತಿಕ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿರುವ ಏಕೈಕ ಕ್ರೀಡಾಪಟುವಾಗಿದ್ದು, ಅವರ ಈ ಸಾಧನೆ ಕ್ರೀಡಾ ಕ್ಷೇತ್ರದಲ್ಲಿ ದೊಡ್ಡ ಮೈಲಿಗಲ್ಲಾಗಿದೆ. ಹಾಗಾಗಿ ಅವರ ಹೆಸರನ್ನು ಭಾರತ ರತ್ನ ಪ್ರಶಸ್ತಿಗೆ ಶಿಫಾರಸ್ಸು ಮಾಡಲಾಗಿದೆ ಎಂದು ಭಾರತ ರಾಷ್ಟ್ರೀಯ ರೈಫಲ್ ಸಂಸ್ಥೆಯ ಸಲಹೆಗಾರ ಬಲ್ಜಿತ್ ಸಿಂಗ್ ಸೇತಿ ತಿಳಿಸಿದರು. ಈ ಮೂಲಕ ನಾವು ಯುವ ಆಟಗಾರರನ್ನು ಪ್ರೋತ್ಸಾಹಿಸುವುದರ ಜತೆಗೆ, ಯುವ ಪೀಳಿಗೆ ಕ್ರೀಡೆಯನ್ನು ವೃತ್ತಿಪರವಾಗಿ ಪರಗಣಿಸಿ ಕ್ರೀಡೆಯ ಅಭಿವೃದ್ಧಿಗೆ ಸಹಕಾರಿಯಾಗಲು ನೆರವಾಗಲಿದೆ ಎಂದು ಅವರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

