ಡ್ರಾ ಸಾಧಿಸಿದ ಆನಂದ್
ಸ್ಯಾಂಡ್ನೆಸ್: ವಿಶ್ವಚಾಂಪಿಯನ್ ವಿಶ್ವನಾಥನ್ ಆನಂದ್ ಇಲ್ಲಿ ನಡೆಯುತ್ತಿರುವ ನಾರ್ವೆ ಚೆಸ್ ಸೂಪರ್ ಪಂದ್ಯಾವಳಿಯಲ್ಲಿ ರಷ್ಯಾದ ಪೀಟರ್ ಸ್ವಿಡ್ಲರ್ ವಿರುದ್ಧ ಡ್ರಾ ಸಾಧಿಸಿದ್ದಾರೆ. ಕಳೆದ ಪಂದ್ಯದಲ್ಲಿ ಅಮೆರಿಕಾದ ಹಿಕರು ನಕಮುರಾ ವಿರುದ್ಧ ಅಚ್ಚರಿಯ ಸೋಲನುಭವಿಸಿದ್ದ ಆನಂದ, ಈ ಪಂದ್ಯದಲ್ಲಿ ಡ್ರಾ ಸಾಧಿಸಿದ್ದಾರೆ. ಈ ಪಂದ್ಯದಲ್ಲಿ ಆನಂದ್ ಕಪ್ಪುಕಾಯಿಗಳನ್ನು ಬಳಸಿದರಾದರೂ, ಪ್ರಬಲ ಪೈಪೋಟಿ ನೀಡಿದ ಆನಂದ್ ಪಂದ್ಯವನ್ನು ಡ್ರಾ ಮಾಡಿಕೊಂಡರು. ಈ ಮೂಲಕ ಆನಂದ್ ಜಂಟಿ ಮೂರನೇ ಸ್ಥಾನದಲ್ಲಿದ್ದಾರೆ. ಇನ್ನು ವಿಶ್ವದ ನಂ.1 ಆಟಗಾರ ಮ್ಯಾಗ್ನಸ್ ಕಾರ್ಲ್ಸೆನ್, ಸತತ ನಾಲ್ಕು ಪಂದ್ಯಗಳಲ್ಲಿ ಜಯ ಸಾಧಿಸಿದ್ದ ಸೆರ್ಗೆಕರ್ಜಕಿನ್ ಅವರನ್ನು ಸೋಲಿಸಿ ಆಘಾತ ನೀಡಿದರು. ಈ ಪಂದ್ಯದಲ್ಲಿ ಸೋಲನುಭವಿಸಿದರು ಕರ್ಜಕಿನ್ ಅಗ್ರ ಸ್ಥಾನದಲ್ಲೇ ಮುಂದುವರಿದಿದ್ದು, ಕಾರ್ಲ್ಸೆನ್ ಜಂಟಿ ಎರಡನೇ ಸ್ಥಾನದಲ್ಲಿದ್ದಾರೆ.
ವೀನಸ್ಗೆ ಸೋಲು
ರೋಮ್: ಅಮೆರಿಕದ ಖ್ಯಾತ ಟೆನಿಸ್ ಆಟಗಾರ್ತಿ ವೀನಸ್ ವಿಲಿಯಮ್ಸ್ ಅವರು ಇಟಾಲಿಯನ್ ಓಪನ್ನ ಮೊದಲ ಸುತ್ತಿನ ಪಂದ್ಯದಲ್ಲಿ ಸೋಲು ಅನುಭವಿಸಿದ್ದಾರೆ. ಸೋಮವಾರ ನಡೆದ ಪಂದ್ಯದಲ್ಲಿ ಅವರು, ಬ್ರಿಟನ್ನ 19 ವರ್ಷ ವಯಸ್ಸಿನ ಲಾರಾ ರಾಬ್ಸನ್ ವಿರುದ್ಧ 6-3, 6-2 ಸೆಟ್ಗಳ ಅಂತರದಲ್ಲಿ ಸೋಲು ಅನುಭವಿಸಿದರು. ಮುಂದಿನ ಪಂದ್ಯದಲ್ಲಿ ಲಾರಾ ರಾಬ್ಸನ್ ಅವರು ವೀನಸ್ ಅವರ ಅಕ್ಕ ಸೆರೇನಾ ವಿಲಿಯಮ್ಸ್ ಅವರನ್ನು ಎದುರಿಸಲಿದ್ದಾರೆ.
ಮಹಿಳಾ ಆ್ಯಷಸ್ಗೆ ಹೊಸ ಸ್ವರೂಪ
ಮೆಲ್ಬರ್ನ್: ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ಮಹಿಳೆಯರ ತಂಡಗಳ ನಡುವೆ ನಡೆಯುವ ಆ್ಯಷಸ್ ಕ್ರಿಕೆಟ್ ಸರಣಿಗೆ ಹೊಸ ಸ್ವರೂಪ ನೀಡಿರುವುದಾಗಿ ಆಸ್ಟ್ರೇಲಿಯಾ ಕ್ರಿಕೆಟ್ ಸಂಸ್ಥೆ (ಸಿಎ) ಹಾಗೂ ಇಂಗ್ಲೆಂಡ್ ಹಾಗೂ ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ)ಗಳು ಜಂಟಿಯಾಗಿ ಮಂಗಳವಾರ ಪ್ರಕಟಿಸಿವೆ. ಹೊಸ ಮಾದರಿಯ ಸರಣಿ ಬಹುಮುಖಿ ರೂಪದ ಸರಣಿಯಾಗಿದ್ದು, ಈ ಸರಣಿಯಲ್ಲಿ ಒಂದು ಟೆಸ್ಟ್ ಪಂದ್ಯ, ಮೂರು ಏಕದಿನ ಪಂದ್ಯಗಳು ಹಾಗೂ ಮೂರು ಅಂತಾರಾಷ್ಟ್ರೀಯ ಟಿ20 ಪಂದ್ಯಗಳು ನಡೆಯಲಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

