ಕ್ರೀಡೆ

ದೆಹಲಿ ಪೊಲೀಸರ ತನಿಖೆಗೆ ಜೈಪುರ ಪೊಲೀಸರ ಸಾಥ್

Published On :

ಜೈಪುರ: ಐಪಿಎಲ್ ಸ್ಪಾಟ್ ಫಿಕ್ಸಿಂಗ್‌ಗೆ ಸಂಬಂಧಪಟ್ಟಂತೆ ಈ ವರ್ಷ ಬಂಧನಕ್ಕೊಳಗಾದ ವ್ಯಕ್ತಿಗಳಿಂದ ಪಡೆಯಲಾದ ಎಲ್ಲಾ ಮಾಹಿತಿ, ಪರಿಕರಗಳನ್ನು ದೆಹಲಿ ಪೊಲೀಸರಿಗೂ ನೀಡಲಾಗುವುದು ಎಂದು ಜೈಪುರ ಪೊಲೀಸ್ ಮೂಲಗಳು ತಿಳಿಸಿವೆ.
ಕಳೆದೊಂದು ವರ್ಷದಿಂದ ಬೆಟ್ಟಿಂಗ್‌ಗೆ ಸಂಬಂಧಿಸಿದಂತೆ, ಕೆಲವು ವ್ಯಕ್ತಿಗಳನ್ನು ಜೈಪುರ ಪೊಲೀಸರು ಬಂಧಿಸಿದ್ದರು. ಆನಂತರ ನಡೆದ ತನಿಖೆ ಹಾಗೂ ಶೋಧಗಳಲ್ಲಿ ಆರೋಪಿಗಳಿಂದ ಲ್ಯಾಪ್‌ಟಾಪ್, ಮೊಬೈಲ್ ಫೋನ್‌ಗಳು ಮತ್ತಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಅಲ್ಲದೇ, 250 ಫೋನ್‌ಕರೆಗಳ ದಾಖಲೆಗಳನ್ನೂ ಸಂಗ್ರಹಿಸಲಾಗಿತ್ತು.
ಈಗ, ದೆಹಲಿ ಪೊಲೀಸರು ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಷಡ್ಯಂತ್ರವನ್ನು ಬೇಧಿಸಿರುವುದರಿಂದ ಅವರ ತನಿಖೆಗೆ ಅನುಕೂಲವಾಗವ ನಿಟ್ಟಿನಲ್ಲಿ ತಾವು ಸಂಗ್ರಹಿಸಿದ್ದ ಮಾಹಿತಿಗಳನ್ನು ದೆಹಲಿ ಪೊಲೀಸರೊಂದಿಗೆ ವಿನಿಮಯ ಮಾಡಿಕೊಳ್ಳುವುದಾಗಿ ಜೈಪುರ ಪೊಲೀಸ್ ವಿಭಾಗ ಹೇಳಿದೆ.

ಚಾಂಡೀಲಾ ಮನೆ ರೈಡ್
ಫರೀದಾಬಾದ್:
ಐಪಿಎಲ್ ಸ್ಪಾಟ್ ಫಿಕ್ಸಿಂಗ್‌ನಲ್ಲಿ ಭಾಗಿಯಾಗಿರುವ ಅಜಿತ್ ಚಾಂಡೀಲಾ ಮನೆಯ ಮೇಲೆ ದೆಹಲಿ ಪೊಲೀಸರ ತಂಡ ಶನಿವಾರ ದಾಳಿ ನಡೆಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಸುಳಿವುಗಳಿಗಾಗಿ ಈ ಶೋಧ ನಡೆಸಲಾಗಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.