ಕ್ರೀಡೆ

ನಟರ ವಿಚಾರಣೆ ಸದ್ಯಕ್ಕಿಲ್ಲ?

Published On :

ಮುಂಬೈ: ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಬಂಧಿತರಾಗಿರುವ ವಿಂದೂ ದಾರಾಸಿಂಗ್ ಅವರ ಹೇಳಿಕೆಯ ಆಧಾರದ ಮೇಲೆ ಯಾವುದೇ ಬಾಲಿವುಡ್ ನಟರಿಗೆ ಸಮನ್ಸ್ ಜಾರಿಗೊಳಿಸುವ ಚಿಂತನೆ ಪೊಲೀಸರಿಗಿಲ್ಲ ಎಂದು ಮೂಲಗಳು ತಿಳಿಸಿವೆ. ಗುರುವಾರದ ವಿಚಾರಣೆ ಸಂದರ್ಭದಲ್ಲಿ, ಮುಂಬೈ ಪೊಲೀಸರೊಂದಿಗೆ ಮಾಹಿತಿ ನೀಡಿದ್ದ ವಿಂದೂ, ಬಾಲಿವುಡ್‌ನ ಹೆಸರಾಂತ ನಟರ ಪರವಾಗಿ ತಾವು ಬೆಟ್ಟಿಂಗ್ ಆಡುತ್ತಿದ್ದುದಾಗಿ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ, ಬಾಲಿವುಡ್ ನಟರನ್ನು ಮುಂಬೈ ಪೊಲೀಸ್ ವಿಚಾರಣೆಗೊಳಪಡಿಸಬಹುದೆಂಬ ನಿರೀಕ್ಷೆಯಿತ್ತು. ಆದರೆ, ಬಾಲಿವುಡ್‌ನ ಯಾವುದೇ ನಟರನ್ನು ವಿಚಾರಣೆಗೊಳಪಡಿಸುವ ವಿಚಾರ ಸದ್ಯಕ್ಕೆ ಪೊಲೀಸರ ಮುಂದಿಲ್ಲ ಎಂದು ಮೂಲಗಳು ಸ್ಪಷ್ಟಪಡಿಸಿವೆ.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.