ಕ್ರೀಡೆ

ಹಾಕಿ: ಸೆಮೀಸ್‌ಗೆ ಹರ್ಯಾಣ

Published On :

ಭೋಪಾಲ್: ಆಕ್ರಮಣಕಾರಿ ಪ್ರದರ್ಶನ ನೀಡುವ ಮೂಲಕ ಹರ್ಯಾಣ ಹಾಗೂ ಜಾರ್ಖಂಡ್ ಮಹಿಳಾ ಹಾಕಿ ತಂಡಗಳು ತಮ್ಮ ಎದುರಾಳಿಗಳನ್ನು ಸುಲಭವಾಗಿ ಮಣಿಸಿದೆ. ಈ ಮೂಲಕ ಇಲ್ಲಿನ ಸಾಯಿ ಸೆಂಟರ್‌ನಲ್ಲಿ ನಡೆಯುತ್ತಿರುವ ಹಾಕಿ ಇಂಡಿಯಾ ಸಬ್ ಜೂನಿಯರ್ ಪುರುಷ ಹಾಗೂ ಮಹಿಳಾ ರಾಷ್ಟ್ರೀಯ ಚಾಂಪಿಯನ್‌ಷಿಪ್‌ನ ಸೆಮಿಫೈನಲ್ ಹಂತಕ್ಕೆ ತಲುಪಿದೆ.  ಹರ್ಯಾಣ ತಂಡ ಬಿ ಗುಂಪಿನಲ್ಲಿ ಜಾರ್ಖಂಡ್ ತಂಡದ ವಿರುದ್ಧ 5-1 ಅಂತರದಲ್ಲಿ ಮಣಿಸುವ ಮೂಲಕ ಸತತವಾಗಿ ಮೂರನೇ ಪಂದ್ಯದಲ್ಲಿ ಗೆಲವು ದಾಖಲಿಸಿದೆ. ಇನ್ನು ಬಿ ಗುಂಪಿನಲ್ಲಿ ಇತರೆ ತಂಡಗಳ ಗೋಲು ದಾಖಲೆಯ ಆಧಾರದ ಮೇಲೆ ಈ ಪಂದ್ಯದಲ್ಲಿ ಸೋತರೂ ಜಾರ್ಖಂಡ್ ತಂಡವು ಸೆಮಿಫೈನಲ್ ಹಂತಕ್ಕೆ ಲಗ್ಗೆ ಇಟ್ಟಿದೆ.

ಸೆಮೀಸ್‌ಗೆ ಮೋನಿಕಾ
ನವದೆಹಲಿ:
ಭಾರತದ ಭರವಸೆ ತಾರೆ ಮೋನಿಕಾ ಬಾತ್ರಾ ಪೊಲೆಂಡ್‌ನಲ್ಲಿ ನಡೆಯುತ್ತಿರುವ ಜೂನಿಯರ್ ಓಪನ್ ಟೇಬಲ್ ಟೇನಿಸ್‌ನ ಬಾಲಕಿಯರ ಸಿಂಗಲ್ಸ್ ವಿಭಾಗದ ಸೆಮಿಫೈನಲ್ ಪ್ರವೇಶಿಸಿದ್ದಾರೆ.  ಮೋನಿಕಾ ತಮಗಿಂತ ಹೆಚ್ಚಿನ ರ್ಯಾಂಕ್ ಹೊಂದಿದ್ದ ಆಟಗಾರ್ತಿ ವಿರುದ್ಧ 4-2 ಅಂತರದಿಂದ ಜಯ ಕಂಡುಕೊಂಡರು. ಈ ತಿಂಗಳ ಆರಂಭದಲ್ಲಿ ನಡೆದ ಕಾಮನ್ವೆಲ್ತ್ ಚಾಂಪಿಯನ್‌ಷಿಪ್‌ನಲ್ಲಿ ಕಂಚಿನ ಪದಕ ಗೆದ್ದ ಮೋನಿಕಾ, ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ 3ನೇ ಶ್ರೇಯಾಂಕ ಪಡೆದಿದ್ದ ಜಪಾನ್‌ನ ಯು ಹಮಾಮೋತೊ ಅವರನ್ನು 9-11, 11-9, 11-7, 10-12, 11-3, 12-10 ಅಂತರದಿಂದ ಸೋಲಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.