ಕ್ರೀಡೆ

ಗುರುನಾಥ್ ಜತೆ ಸಂಬಂಧವಿಲ್ಲ: ಸಿಎಸ್‌ಕೆ

Published On :

ಚೆನ್ನೈ/ಮುಂಬೈ: ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಗುರುತಿಸಲ್ಪಟ್ಟಿರುವ ಗುರುನಾಥ್ ಮೇಯಪ್ಪನ್ ಅವರಿಗೂ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡಕ್ಕೂ ಯಾವುದೇ ನಂಟಿಲ್ಲ ಎಂದು ಸಿಎಸ್‌ಕೆ ಮೂಲಗಳು ತಿಳಿಸಿವೆ.
ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಬಾಲಿವುಡ್ ನಟ ವಿಂದೂ ದಾರಾಸಿಂಗ್ ಅವರು, ಸಿಎಸ್‌ಕೆ ಮುಖ್ಯಸ್ಥ ಗುರುನಾಥ್ ಮೇಯಪ್ಪನ್ ಹಾಗೂ ಬಾಲಿವುಡ್‌ನ ಕೆಲ ಹೆಸರಾಂತ ನಟರ ಪರವಾಗಿ ತಾನು ಬೆಟ್ಟಿಂಗ್ ಆಡುತ್ತಿದ್ದೆ ಎಂದು ಹೇಳಿಕೆ ನೀಡಿದ್ದರು. ಅಲ್ಲದೇ, ಪಂದ್ಯವೊಂದಕ್ಕೆ ಗುರುನಾಥ್ ಅವರು ಒಂದು ಕೋಟಿ ಮೌಲ್ಯದ ಬೆಟ್ಟಿಂಗ್ ನಡೆಸುತ್ತಿದ್ದರು ಎಂದು ಹೇಳಿಕೆ ನೀಡಿದ್ದರು.
ವಿಂದೂ ಅವರ ಈ ಹೇಳಿಕೆ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಲೇ ಎಚ್ಚೆತ್ತುಕೊಂಡಿರುವ ಸಿಎಸ್‌ಕೆ ಒಡೆತನ ಹೊಂದಿರುವ ಇಂಡಿಯಾ ಸಿಮೆಂಟ್ಸ್ ಸಂಸ್ಥೆ, ಶುಕ್ರವಾರ ಅಧಿಕೃತ ಪ್ರಕಟಣೆ ನೀಡಿದೆ.
ಮೇಯಪ್ಪನ್ ಅವರು ಸಿಎಸ್‌ಕೆ ತಂಡದ ಮಾಲೀಕರೂ ಅಲ್ಲ ಅಥವಾ ಅವರು ತಂಡದ ಮುಖ್ಯಸ್ಥರೂ ಅಲ್ಲ ಎಂದು ಪ್ರಕಟಣೆಯಲ್ಲಿ ಹೇಳುವ ಮೂಲಕ ತನ್ನ ರಾಗ ಬದಲಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.