ಸಾಧಾರಣ ಮೊತ್ತದತ್ತ ಇಂಗ್ಲೆಂಡ್
ಲೀಡ್ಸ್: ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವೆ ಆರಂಭಗೊಂಡಿರುವ ಎರಡನೇ ಟೆಸ್ಟ್ ಪಂದ್ಯದ ಶನಿವಾರದ ದಿನದಾಟದಲ್ಲಿ ಇಂಗ್ಲೆಂಡ್ ತಂಡ ತನ್ನ ಮೊದಲ ಇನಿಂಗ್ಸ್ನಲ್ಲಿ ಸಾಧಾರಣ ಮೊತ್ತಕ್ಕೆ ಕುಸಿಯುವ ಭೀತಿಯಲ್ಲಿತ್ತು. ಪಂದ್ಯದ ಮೊದಲ ದಿನದಾಟ (ಶುಕ್ರವಾರ) ಮಳೆಯಿಂದಾಗಿ ರದ್ದಾದ ಹಿನ್ನೆಲೆಯಲ್ಲಿ, ಶನಿವಾರ ಪಂದ್ಯ ಆರಂಭವಾಗಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಇಂಗ್ಲೆಂಡ್, ಆರಂಭದಿಂದಲೇ ಕುಸಿತಕ್ಕೊಳಗಾಗಿ, ಪತ್ರಿಕೆ ಮುದ್ರಣಕ್ಕೆ ಹೋಗುವ ಸಂದರ್ಭದಲ್ಲಿ 90 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 316 ರನ್ ಗಳಿಸಿತ್ತು. 31 ರನ್ ಗಳಿಸಿದ್ದ ಮೆಕಲಂ ಹಾಗೂ 8 ರನ್ ಗಳಿಸಿದ್ದ ಸ್ವಾನ್ ಕ್ರೀಸ್ನಲ್ಲಿದ್ದರು. ಕಿವೀಸ್ನ ಬೌಲ್ಟ್ ಅವರು 3 ವಿಕೆಟ್ ಗಳಿಸಿದರೆ, ಸೌಥೀ, ವಾಂಗರ್, ಬ್ರೇಸ್ವೆಲ್, ವಿಲಿಯಮ್ಸನ್ ಅವರು ತಲಾ ಒಂದು ವಿಕೆಟ್ ಪಡೆದರು.
ಸಂಕ್ಷಿಪ್ತ ಸ್ಕೋರ್
ಇಂಗ್ಲೆಂಡ್: 316/7 (90 ಓವರ್)
(ಪತ್ರಿಕೆ ಮುದ್ರಣಕ್ಕೆ ಹೋಗುವ ವೇಳೆ)
ರೂಟ್ 104, ಬೇರ್ಸ್ಟೊ 64, ಕುಕ್ 34, ಬೆಲ್ 30
ಬೌಲಿಂಗ್: ಬೌಲ್ಟ್ 48/3, ವಿಲಿಯಮ್ಸನ್ 49/1
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

