ಕ್ರೀಡೆ

ಅಜರೆಂಕಾ ವಿಕ್ಟರಿ

Published On :

ಪ್ಯಾರೀಸ್: ಆಸ್ಟ್ರೇಲಿಯಾ ಓಪನ್ ಚಾಂಪಿಯನ್‌ಷಿಪ್‌ನ ಡಬಲ್ಸ್ ವಿಭಾಗದಲ್ಲಿ ಚಾಂಪಿಯನ್ ಎನಿಸಿದ್ದ ವಿಕ್ಟೋರಿಯಾ ಅಜರೆಂಕಾ, ಫ್ರೆಂಚ್ ಓಪನ್ ಪಂದ್ಯಾವಳಿಯ ದ್ವಿತೀಯ ಸುತ್ತಿಗೆ ಪ್ರವೇಶಿಸಿದ್ದಾರೆ.
ಅಜರೆಂಕಾ ಮೊದಲ ಸುತ್ತಿನ ಪಂದ್ಯದಲ್ಲಿ ರಷ್ಯಾದ ಎಲೆನಾ ವೆಸ್ನಿನಾ ಅವರನ್ನು 6-1, 6-4 ಸೋಲಿಸುವ ಮೂಲಕ ದ್ವಿತೀಯ ಸುತ್ತಿಗೆ ಪ್ರವೇಶಿಸಿದರು. ದ್ವಿತೀಯ ಸುತ್ತಿನ ಪಂದ್ಯದಲ್ಲಿ ಅಜರೆಂಕಾ 19 ವರ್ಷದ ಅನ್ನಿಕಾ ಬೆಕ್ ಅವರನ್ನು ಸೋಲಿಸಿದರು.
ಈ ಮುನ್ನ ಅಜರೆಂಕಾ ಅವರು 2009 ಮತ್ತು 2011ರಲ್ಲಿ ಪ್ಯಾರೀಸ್‌ನಲ್ಲಿ ಅಂತಿಮ 8ರ ಘಟ್ಟ ತಲುಪಿದ್ದೇ ದೊಡ್ಡ ಸಾಧನೆಯಾಗಿದೆ. ಆದರೆ, ವೆಸ್ನಿನಾ ವಿರುದ್ಧ ಸುಲಭವಾಗಿ ಜಯ ಸಾಧಿಸಿದ್ದನ್ನು ನೋಡಿದರೆ, ಪಂದ್ಯಾವಳಿಯಲ್ಲಿ ಅಜರೆಂಕಾ ಪ್ರಶಸ್ತಿ ಮೇಲೆ ಕಣ್ಣಿಟ್ಟಿದ್ದಾರೆ ಎಂಬುದು ಸ್ಪಷ್ಟವಾಗಿತ್ತು.
ಇನ್ನೊಂದು ಪಂದ್ಯದಲ್ಲಿ ನಾಲ್ಕನೇ ಶ್ರೇಯಾಂಕ ಪಡೆದಿರುವ ಪೊಲೆಂಡ್‌ನ ಅಗ್ನೀಸಕ್ ರಾದ್ವಾಕ್ಸಾ ಅವರು, ಅಮೆರಿಕದ ಮಲ್ಲೋರಿ ಬರ್ಡಟ್ಟೆ ಅವರನ್ನು 6-3, 6-2 ನೇರ ಸೆಟ್‌ಗಳಿಂದ ಸೋಲಿಸುವ ಮೂಲಕ 4ನೇ ಸುತ್ತಿಗೆ ಪ್ರವೇಶಿಸಿದರು.
ಈಗ ಅಗ್ನೀಸಕ್ ರಾದ್ವಾಕ್ಸಾ ಅಂತಿಮ 16ರ ಘಟ್ಟ ಪ್ರವೇಶಿಸಲು, ತಮ್ಮ ಸೋದರಿ ಉರ್ಸುಜುಲಾ ಅವರನ್ನು ಎದುರಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.