ದಿಲ್ಷಾನ್ಗೆ ದಂಡ

ಚಿತ್ತಗಾಂಗ್: ಅಂಪೈರ್ ತೀರ್ಪಿಗೆ ವಿರುದ್ಧವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಶ್ರೀಲಂಕಾ ತಂಡದ ಆರಂಭಕ ಆಟಗಾರ ತಿಲಕರತ್ನೆ ದಿಲ್ಷಾನ್ಗೆ ದಂಡ ವಿಧಿಸಲಾಗಿದೆ.
ಸೋಮವಾರ ನಡೆದ ಟಿ20 ವಿಶ್ವಕಪ್ನ ಸೂಪರ್ 10 ಹಂತದ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ದಿಲ್ಷಾನ್ ಅಂಪೈರ್ ಔಟೆಂದು ತೀರ್ಪು ನೀಡಿದಾಗ ದಿಲ್ಷಾನ್ ಅಗೌರವವಾಗಿ ವರ್ತಿಸಿದರು. ಇದು ಐಸಿಸಿ ನಿಯಮದ ಉಲ್ಲಂಘನೆಯಾಗಿದ್ದು, ಪಂದ್ಯದ ಶೇ.20ರಷ್ಟು ಮೊತ್ತವನ್ನು ದಂಡವಿಧಿಸಲಾಗಿದೆ ಎಂದು ಐಸಿಸಿ ಹೇಳಿಕೆಯಲ್ಲಿ ತಿಳಿಸಿದೆ.
ಲಂಕಾ ಇನಿಂಗ್ಸ್ನ ನಾಲ್ಕನೇ ಓವರ್ನಲ್ಲಿ ಬೌಲ್ಟ್ ಎಸೆದ ಚೆಂಡು ದಿಲ್ಷಾನ್ ಗ್ಲೌಸ್ಗೆ ತಾಗಿ ಕೀಪರ್ ಕೈಸೇರಿತು. ಆದರೆ ದಿಲ್ಷಾನ್ ಗ್ಲೌಸ್ಗೆ ಚೆಂಡು ತಾಕಿಲ್ಲ ಎಂದು ಸಾಬೀತು ಪಡಿಸಲು ತಮ್ಮ ಮೊಣಗೈಯನ್ನು ಉಜ್ಜಿಕೊಂಡರು. ಆದರೆ ಅಂಪೈರ್ ಔಟೆಂದು ತೀರ್ಪು ನೀಡಿದಾಗ ದಿಲ್ಷಾನ್ ಅಸಮಾಧಾನ ವ್ಯಕ್ತಪಡಿಸಿದರು.
ದಿಲ್ಷಾನ್ ಅಂಪೈರ್ ತೀರ್ಪಿಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಅಂತಾರಾಷ್ಟ್ರೀಯ ಪಂದ್ಯದಲ್ಲಿ ಆಟಗಾರನೋಬ್ಬ ಅಂಪೈರ್ ತೀರ್ಪಿಗೆ ಅಸಮಾಧಾನ ವ್ಯಕ್ತಪಡಿಸಿದರೆ ಅದು ಐಸಿಸಿಯ 2.1.3 ನಿಯಮದ ಉಲ್ಲಂಘನೆಯಾಗಲಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


