ಕ್ರೀಡೆ

ಹ್ಯಾಟ್ರಿಕ್ ಒಲಿಂಪಿಕ್ಸ್ ಪದಕದ ಮೇಲೆ ಫ್ರೇಸರ್ ಕಣ್ಣು

Published On :
ಕಿಂಗ್ಸ್‌ಸ್ಟನ್: ಜಮೈಕಾದ ಸ್ಪ್ರಿಂಟರ್ ಶೆಲ್ಲಿ ಅನ್ ಫ್ರೇಸರ್ ಪ್ರೈಸ್, 2016ರ ರಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಪಡೆಯುವ ಮೂಲಕ ಒಲಿಂಪಿಕ್ಸ್‌ನಲ್ಲಿ ಸತತ ಮೂರು ಚಿನ್ನದ ಪದಕ ಪಡೆದ ಮೊದಲ ಮಹಿಳಾ ಆಟಗಾರ್ತಿ ಪಟ್ಟ ಪಡೆಯಲು ಸಿದ್ಧತೆ ನಡೆಸಿದ್ದಾರೆ ಎಂದು ಆಕೆಯ ಕೋಚ್ ಸ್ಟೀಫನ್ ಫ್ರಾನ್ಸಿಸ್ ತಿಳಿಸಿದ್ದಾರೆ.
ಫ್ರೇಸರ್ 2008ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ ಹಾಗೂ 2012ರ ಲಂಡನ್ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಬಾಚಿಕೊಂಡಿದ್ದಾರೆ. ಹಾಗಾಗಿ ರಿಯೊ ಒಲಿಂಪಿಕ್ಸ್‌ನಲ್ಲೂ ಅಗ್ರ ಸ್ಥಾನ ಪಡೆದು ಹ್ಯಾಟ್ರಿಕ್ ಮಾಡುವ ಇಚ್ಛೆ ಫ್ರೇಸರ್‌ದ್ದಾಗಿದೆ.
ಒಲಿಂಪಿಕ್ಸ್‌ನ 100ಮೀ.ಓಟದಲ್ಲಿ ಚಿನ್ನದ ಪದಕ ಪಡೆಯುವ ಮೂಲಕ ಸತತ ಮೂರು ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಪಡೆದ ಮಹಿಳಾ ಅಥ್ಲೀಟ್ ಎಂಬ ಸಾಧನೆ ಮಾಡುವುದು ಆಕೆಯ ಗುರಿಯಾಗಿದೆ. ನಂತರ ಎರಡನೇಯದಾಗಿ 100 ಮತ್ತು 200 ಮೀ.ನಲ್ಲಿ ಪದಕ ಪಡೆಯಲು ಸಹ ಅವರು ಪ್ರಯತ್ನಿಸುತ್ತಿದ್ದಾರೆ. ಹಾಗಾಗಿ ನಾವು ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಈ ಎಲ್ಲಾ ತಯಾರಿಗಳನ್ನು ನಡೆಸುವುದಾಗಿ ತಿಳಿಸಿದ್ದಾರೆ.
ಫ್ರೇಸರ್ ತನ್ನ ಫಿಟ್ನೆಸ್ ಕಾಯ್ದುಕೊಳ್ಳುವ ಶೈಲಿ ನನಗೆ ಮೆಚ್ಚುಗೆಯಾಗಿದೆ. ಅಲ್ಲದೆ ಅಗ್ರಸ್ಥಾನವನ್ನು ಕಾಯ್ದುಕೊಳ್ಳಲು ಹೆಚ್ಚಿನ ಮನೋಬಲ ಅಗತ್ಯವಿದೆ. ಹಾಗಾಗಿ ಆಕೆ ಉತ್ತಮ ರೀತಿಯಲ್ಲಿ ತಯಾರಿ ನಡೆಸುತ್ತಿದ್ದಾಳೆ. ಇದೇ ರೀತಿ ಆಕೆ ಸಿದ್ಧತೆ ನಡೆಸಿದರೆ, ಆಕೆ ಖಂಡಿತವಾಗಿಯೂ ಮತ್ತಷ್ಟು ಸಾಧನೆ ಮಾಡಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.