ಐಪಿಎಲ್ನಿಂದ ಸಾಬೀತು ಪಡಿಸಬೇಕಿಲ್ಲ
ನವದೆಹಲಿ: ಇಂಗ್ಲೆಂಡ್ ತಂಡದ ಮಾಜಿ ಆಟಗಾರ ಕೆವಿನ್ ಪೀಟರ್ಸನ್, ಐಪಿಎಲ್ ಪಂದ್ಯಾವಳಿಯಲ್ಲಿ ಡೆಲ್ಲಿ ಡೇರ್ಡೆವಿಲ್ಸ್ ತಂಡದ ಪರ ಆಡಲಿದ್ದು, ಈ ಅವಕಾಶದಿಂದ ನನ್ನ ಸಾಮರ್ಥ್ಯವನ್ನು ಸಾಬೀತುಪಡಿಸುವ ಅವಶ್ಯಕತೆ ಇಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಇಸಿಬಿ, ಕೆವಿನ್ ಪೀಟರ್ಸನ್ ಅವರನ್ನು ರಾಷ್ಟ್ರೀಯ ತಂಡದಿಂದ ಕೈಬಿಟ್ಟಿದ್ದರಿಂದ ಅವರ ಅಂತಾರಾಷ್ಟ್ರೀಯ ವೃತ್ತಿ ಜೀವನಕ್ಕೆ ದೊಡ್ಡ ಪೆಟ್ಟು ಬಿದ್ದಿದೆ.
ನಾನು ಈಗಾಗಲೇ ಇಂಗ್ಲೆಂಡ್ ಪರ ಆಡುವುದಿಲ್ಲ ಎಂಬ ಅಂಶವನ್ನು ಮನಗಂಡಿದ್ದೇನೆ. ಆ ವಿಷಯದಿಂದ ಮುಂದಕ್ಕೆ ಸಾಗಲು ನಿರ್ಧರಿಸಿದ್ದೇನೆ ಎಂದು ತಿಳಿಸಿದರು.
ಕ್ರಿಕೆಟ್ನಿಂದ ಇಷ್ಟು ದಿನಗಳ ಕಾಲ ಸಿಕ್ಕ ವಿಶ್ರಾಂತಿ ಅತ್ಯುತ್ತಮವಾಗಿತ್ತು. ಹಾಗಾಗಿ ಐಪಿಎಲ್ನಲ್ಲಿ ಆಡಲು ಉತ್ಸುಕನಾಗಿದ್ದೇನೆ. ಈ ಹಿಂದಿನ ಬೆಳವಣಿಗೆಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಹಾಗಾಗಿ ನಾನು ಇಲ್ಲಿ ನನ್ನ ಸಾಮರ್ಥ್ಯವನ್ನು ಸಾಬೀತುಪಡಿಸುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ನಾನು ಐಪಿಎಲ್ನಲ್ಲಿ ಆಡಲು ಇಚ್ಛಿಸುತ್ತೇನೆ. ಕಳೆದ ಬಾರಿ ಗಾಯದ ಸಮಸ್ಯೆಯಿಂದಾಗಿ ನಾನು ಈ ಪಂದ್ಯಾವಳಿಯಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಹಾಗಾಗಿ ಈ ಬಾರಿ ಮತ್ತೆ ಅವಕಾಶ ಸಿಕ್ಕಿರುವುದು ಸಂತಸ ತಂದಿದೆ. ನಾನು ಕಳೆದ 10 ವರ್ಷಗಳಿಂದ ವಿಶ್ವದ ಎಲ್ಲಾ ಭಾಗಗಳಲ್ಲಿ ಕ್ರಿಕೆಟ್ ಆಡಿದ್ದು, ಈಗ ನನ್ನ ಸಾಮರ್ಥ್ಯ ಸಾಬೀತುಪಡಿಸುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ಐಪಿಎಲ್ ಏಳನೇ ಆವೃತ್ತಿಯಲ್ಲಿ ಕೆವಿನ್ ಡೆಲ್ಲಿ ಡೇರ್ಡೆವಿಲ್ಸ್ ತಂಡದ ನಾಯಕನಾಗಿ ಜವಬ್ದಾರಿ ನಿರ್ವಹಿಸಲಿದ್ದು, ತಂಡ ಸಮತೋಲನದಿಂದ ಕೂಡಿದ್ದು ಉತ್ತಮ ಪ್ರದರ್ಶನ ನೀಡಲಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

