ಟೆಕ್ಸಾಸ್ ಓಪನ್: ಪ್ರಶಸ್ತಿ ಸುತ್ತಿಗೆ ದೀಪಿಕಾ ಪಳ್ಳಿಕಲ್
ಹೌಸ್ಟನ್: ಭಾರತದ ಅಗ್ರ ಸ್ಕ್ವಾಷ್ ಆಟಗಾರ್ತಿ ದೀಪಿಕಾ ಪಳ್ಳಿಕಲ್ ತಮ್ಮ ಉತ್ತಮ ಪ್ರದರ್ಶನ ಮುಂದುವರಿಸಿದ್ದು, ಟೆಕ್ಸಾಸ್ ಓಪನ್ ಸ್ಕ್ವಾಷ್ ಟೂರ್ನಿಯ ಫೈನಲ್ಗೆ ಲಗ್ಗೆಹಾಕಿದ್ದಾರೆ.
ಭಾನುವಾರ ನಡೆದ ಉಪಾಂತ್ಯದ ಪಂದ್ಯದಲ್ಲಿ ದೀಪಿಕಾ ತಮ್ಮ ಎದುರಾಳಿ ಅಗ್ರ ಶ್ರೇಯಾಂಕಿತೆ ಐರ್ಲೆಂಡ್ನ ಮ್ಯಾಡ್ಲೈನ್ ಪೆರ್ರಿ ವಿರುದ್ಧ ಗೆಲವು ದಾಖಲಿಸಿದ್ದಾರೆ.
75 ನಿಮಿಷಗಳ ಕಾಲ ನಡೆದ ಪಂದ್ಯದಲ್ಲಿ ದೀಪಿಕಾ 11-7, 11-13, 13-11, 10-12, 11-4 ಸೆಟ್ಗಳಅಂತರದಲ್ಲಿ ಪೆರ್ರಿ ವಿರುದ್ಧ ಗೆಲವು ದಾಖಲಿಸಿದರು. ಈ ಮೂಲಕ ಪ್ರಸಕ್ತ ಸಾಲಿನಲ್ಲಿ ದೀಪಿಕಾ ಮೊದಲಬಾರಿಗೆ ಪಂದ್ಯಾವಳಿಯಲ್ಲಿ ಫೈನಲ್ ಪ್ರವೇಶಿಸಿದ್ದು, ವೃತ್ತಿ ಜೀವನದಲ್ಲಿ 12ನೇ ಬಾರಿಗೆ ಪ್ರಶಸ್ತಿ ಸುತ್ತಿಗೆ ಪ್ರವೇಶಿಸಿದ್ದಾರೆ.
ಭಾರತದ ಸ್ಕ್ವಾಷ್ ತಾರೆ ಪ್ರಶಸ್ತಿ ಸುತ್ತಿನಲ್ಲಿ ಪ್ರಬಲ ಈಜಿಪ್ಟ್ನ ನೂರ್ ಎಲ್ ಶೆರ್ಬಿನಿ ಅವರನ್ನು ಎದುರಿಸಲಿದ್ದು, ಪ್ರಬಲ ಸವಾಲು ಎದುರಿಸುವ ಸಾಧ್ಯತೆಗಳಿವೆ. ಶೆರ್ಬಿನ್ ವಿಶ್ವದ ನಂಬರ್ ಒನ್ ಆಟಗಾರ್ತಿ ಮಲೇಷ್ಯಾದ ನಿಕೊಲ್ ಡೇವಿಡ್ ಅವರನ್ನು ಮಣಿಸಿ ಪ್ರಶಸ್ತಿ ಸುತ್ತಿಗೆ ಪ್ರವೇಶಿಸಿದ್ದಾರೆ.
ಪಳ್ಳಿಕಲ್ ಸತತ ಎರಡು ಪಂದ್ಯಗಳಲ್ಲಿ ಐದು ಸೆಟ್ಗಳ ಪಂದ್ಯವನ್ನಾಡಿದ್ದು, ಮುಂದಿನ ಪಂದ್ಯದಲ್ಲಿ ಯಾವ ರೀತಿಯ ಪ್ರದರ್ಶನ ತೋರಲಿದ್ದಾರೆ ಎಂಬ ಕುತೂಹಲ ಮೂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

