20ರಂದು ಮುಂಬೈನಲ್ಲಿ ಬಿಸಿಸಿಐ ತುರ್ತು ಸಭೆ
ಮುಂಬೈ: ಸುಪ್ರೀಂ ಕೋರ್ಟ್ ಮುಂದಿರುವ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ಪ್ರಕರಣದ ಬಗ್ಗೆ ಚರ್ಚೆ ನಡೆಸುವ ಹಿನ್ನೆಲೆಯಲ್ಲಿ ಹಾಗೂ ತನ್ನ ಸದಸ್ಯ ಸಂಸ್ಥೆಗಳ ಬೇಡಿಕೆಗಳ ಬಗ್ಗೆ ಗಮನಹರಿಸುವ ಉದ್ದೇಶದಿಂದ ಬಿಸಿಸಿಐ ಏ.20ರಂದು ತುರ್ತು ಕಾರ್ಯಕಾರಿ ಸಮಿತಿ ಸಭೆಯನ್ನು ನಡೆಸಲು ನಿರ್ಧರಿಸಿದೆ.
ಏ.20ರಂದು ಮುಂಬೈನಲ್ಲಿ ಬಿಸಿಸಿಐ ತುರ್ತು ಕಾರ್ಯಕಾರಿ ಸಮಿತಿ ಸಭೆಯನ್ನು ಕರೆಯಲಾಗಿದೆ ಎಂದು ಬಿಸಿಸಿಐ ಉಪಾಧ್ಯಕ್ಷ ರವಿ ಸಾವಂತ್ ತಿಳಿಸಿದ್ದಾರೆ.
ಬುಧವಾರ ಸ್ಪಾಟ್ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ಪ್ರಕರಣದಲ್ಲಿ ಆರೋಪ ಹೊತ್ತಿರುವ ಎನ್.ಶ್ರೀನಿವಾಸನ್ ಹಾಗೂ ಇತರೆ 12 ಮಂದಿ ಸಂಪೂರ್ಣವಾಗಿ ಮುಕ್ತರಾಗುವವರೆಗೆ ಮತ್ತೆ ಬಿಸಿಸಿಐಗೆ ಮರಳುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿರುವ ಹಿನ್ನೆಲೆಯಲ್ಲಿ ಬಿಸಿಸಿಐ ಈ ಸಭೆಯನ್ನು ಕರೆದಿದೆ.
ರಾಜಸ್ಥಾನ ಕ್ರಿಕೆಟ್ ಸಂಸ್ಥೆ ಸೇರಿದಂತೆ ಆರು ಸದಸ್ಯ ಸಂಸ್ಥೆಗಳು ತುರ್ತು ಕಾರ್ಯಕಾರಿ ಸಮಿತಿ ಸಭೆಗೆ ಒತ್ತಾಯಿಸಿವೆ. ಹಾಗಾಗಿ ಭಾನುವಾರ ಸಭೆ ನಡೆಸಿ ಈ ಪ್ರಕರಣದ ಕುರಿತು ಚರ್ಚೆ ನಡೆಸಲಾಗುವುದು.
ಸುಪ್ರೀಂ ಕೋರ್ಟ್ ವಿಚಾರಣೆಯ ವೇಳೆ ಕೆಲವು ಸಲಹೆಗಳನ್ನು ನೀಡಿದ್ದು, ಆ ಸಲಹೆಗಳನ್ನು ಮಂಡಳಿಯ ಸಭೆಯಲ್ಲಿ ಚರ್ಚಿಸಿಲ್ಲ. ಅಲ್ಲದೆ ಈ ಕಾರಣಕ್ಕಾಗಿ ಸಭೆಯನ್ನು ನಡೆಸಿಲ್ಲ. ಹಾಗಾಗಿ ಈ ಕುರಿತು ನಿರ್ಧಾರಕ್ಕೆ ಬರಲು ತುರ್ತು ಸಭೆ ಅಗತ್ಯವಿದೆ ಎಂದು ಆರ್‌ಸಿಎ ಕಾರ್ಯದರ್ಶಿ ಕೆ.ಕೆ ಶರ್ಮಾ ಬಿಸಿಸಿಐಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

