ಕ್ರೀಡೆ

ಬಿಸಿಸಿಐ ಸಭೆಗೆ ಶಿವಲಾಲ್ ನೇತೃತ್ವ

Published On :

ಮುಂಬೈ: ಭಾರತದ ಮಾಜಿ ಟೆಸ್ಟ್ ಆಫ್‌ಸ್ಪಿನ್ನರ್ ಶಿವ್‌ಲಾಲ್ ಯಾದವ್ ಅವರು ಭಾನುವಾರ ನಡೆಯಲಿರುವ ಬಿಸಿಸಿಐ ತುರ್ತು ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ.
ಐಪಿಎಲ್ ಹೊರತಾದ ವಿಷ್ಯಗಳಿಗೆ ಸಂಬಂಧಿಸಿದಂತೆ ಬಿಸಿಸಿಐ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲು ಸುಪ್ರೀಂ ಕೋರ್ಟ್ ಶಿವಲಾಲ್ ಯಾದವ್ ಹೆಸರನ್ನು ಸೂಚಿಸಿದ್ದರಿಂದ ಅವರು ಈ ಸಭೆಯ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ.
ಶುಕ್ರವಾರ ಪ್ರಕಟವಾದ ಬಿಸಿಸಿಐ ಹೇಳಿಕೆಯಲ್ಲಿ ಶಿವಲಾಲ್ ಯಾದವ್, ಭಾನುವಾರ ನಡೆಯಲಿರುವ ಸಭೆಗೆ ಅಧ್ಯಕ್ಷತೆಯನ್ನು ವಹಿಸಿಕೊಳ್ಳುವುದಾಗಿ ತಿಳಿಸಿದ್ದಾರೆ.
ಬಿಸಿಸಿಐ ವೆಬ್‌ಸೈಟ್‌ನಲ್ಲಿ ಸುನಿಲ್ ಗಾವಸ್ಕರ್ ಅವರು ಸಭೆಯ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ ಎಂದು ತಿಳಿಸಿತ್ತು. ಈ ಕುರಿತು ಪ್ರತಿಕ್ರಿಯೆ ನೀಡಿದ ಶಿವಲಾಲ್, ಅವರು ದುಬೈನಲ್ಲಿ ಐಪಿಎಲ್ ಆಯೋಜನೆಯಲ್ಲಿ ನಿರತರಾಗಿರುವುದರಿಂದ ಸಭೆಯಲ್ಲಿ ಭಾಗವಹಿಸುವರೊ ಅಥವಾ ಇಲ್ಲವೊ ಎಂಬುದರ ಬಗ್ಗೆ ಖಚಿತ ಮಾಹಿತಿ ಇಲ್ಲ. ಹಾಗಾಗಿ ಸಭೆಯ ಅಧ್ಯಕ್ಷತೆಯನ್ನು ನಾನು ವಹಿಸಿಕೊಳ್ಳುತ್ತೇನೆ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.