ಕ್ರೀಡೆ

ಹೊಸ ದಾರಿಗೆ ಬಿಸಿಸಿಐ ಹುಡುಕಾಟ

Published On :

ಮುಂಬೈ: ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನ ನಿದೇರ್ಶನಕ್ಕೆ ಹಾಗೂ ಈ ಸಮಸ್ಯೆಗೆ ಪರಿಹಾರ ಹುಡುಕುವ ದಾರಿಯನ್ನು ಕಂಡುಕೊಳ್ಳುವ ಸಲುವಾಗಿ ಬಿಸಿಸಿಐ ಇಂದು ತನ್ನ ಕಾರ್ಯಕಾರಿ ಸಮಿತಿ ಸಭೆ ನಡೆಸಲಿದೆ.
ಮತ್ತೆ ಬಿಸಿಸಿಐಗೆ ಮರಳಲು ಶ್ರೀನಿವಾಸನ್ ಸಲ್ಲಿಸಿದ್ದ ಅರ್ಜಿಯನ್ನು ವಾಜಾಗೊಳಿಸಿದ ಸುಪ್ರೀಂ ಕೋರ್ಟ್, ಶ್ರೀನಿ ಹಾಗೂ ಮುದ್ಗಲ್ ಸಮಿತಿ ವರದಿಯಲ್ಲಿ ಆರೋಪ ಎದುರಿಸುತ್ತಿರುವ ಇತರೆ 12 ಮಂದಿಯ ವಿರುದ್ಧ ಮುಕ್ತ ತನಿಖೆ ನಡೆಸಲು ಬಿಸಿಸಿಐಗೆ ನಿರ್ದೇಶನ ನೀಡಿತ್ತು.
ಸುಪ್ರೀಂ ಕೋರ್ಟ್ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ವಿಚಾರಣೆಗೆ 2 ದಿನಗಳು ಬಾಕಿ ಇರುವಂತೆ, ಸದಸ್ಯ ಸಂಸ್ಥೆಗಳಿಂದ ತೀವ್ರ ಒತ್ತಡ ಎದುರಾದ ಹಿನ್ನೆಲೆಯಲ್ಲಿ, ಬಿಸಿಸಿಐ ಸಭೆ ನಡೆಸಲು ನಿರ್ಧರಿಸಿದೆ.
ಹಂಗಾಮಿ ಅಧ್ಯಕ್ಷ ಸುನಿಲ್ ಗಾವಸ್ಕರ್ ಹಾಗೂ ಉಪಾಧ್ಯಕ್ಷ ಸಂಜಯ್ ಪಟೇಲ್ ಸೇರಿದಂತೆ ಮಂಡಳಿಯ ಪ್ರಭಾವಿ  ವ್ಯಕ್ತಿಗಳು ಐಪಿಎಲ್ ಆಯೋಜನೆ ನಿಮಿತ್ತ ಯುಎಇಯಲ್ಲಿದ್ದಾರೆ. ಹಾಗಾಗಿ ಸಭೆಯ ವೇಳೆಗೆ ಅವರು ವಾಪಸ್ಸಾಗುವ ನಿರೀಕ್ಷೆಗಳಿವೆ.
ಇತ್ತ ಕೆಲವು ಸದಸ್ಯ ಸಂಸ್ಥೆಗಳು ಬಿಸಿಸಿಐ ಮಾಜಿ ಅಧ್ಯಕ್ಷ ಶಶಾಂಕ್ ಮನೋಹರ್ ನೇತೃತ್ವದಲ್ಲಿ ತನಿಖೆಯನ್ನು ನಡೆಸಬೇಕು ಎಂದು ಒತ್ತಾಯಿಸಿವೆ.
ಬಿಹಾರ ಕ್ರಿಕೆಟ್‌ನ ಮುಖ್ಯಸ್ಥ ಆದಿತ್ಯ ವರ್ಮಾ, ಶುಕ್ರವಾರ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ, ಕಾರ್ಯಕಾರಿ ಸಮಿತಿ ಸಭೆಯಲ್ಲಿ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ಪ್ರಕರಣದ ತನಿಖೆಯನ್ನು ಶಶಾಂಕ್ ಮನೋಹರ್‌ಗೆ ವಹಿಸಬೇಕು. ಮನೋಹರ್ ಮಾತ್ರ ಬಿಸಿಸಿಐ ಹಾಗೂ ಐಪಿಎಲ್ ಅನ್ನು ಸ್ವಚ್ಛಗೊಳಿಸಲು ಸಾಧ್ಯ ಎಂದು ತಿಳಿಸಿದರು.
ಬಿಸಿಸಿಐ ತನ್ನ ಸಾಂಸ್ಥಿಕ ಸ್ವಾಯತ್ತತೆಯನ್ನು ಕಾಪಾಡಿಕೊಳ್ಳಲು ಸ್ಪಾಟ್ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀನಿವಾಸನ್ ಹಾಗೂ ಇತರೆ 12 ಮಂದಿ ವಿರುದ್ಧ ತನಿಖೆ ನಡೆಸಬೇಕು. ಈ ವಿಷಯದ ಕುರಿತು ನ್ಯಾಯಾಲಯ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಕಟುವಾಗಿ ತಿಳಿಸಿತ್ತು.
ಮುದ್ಗಲ್ ಸಮಿತಿ ಸಭೆ ನೀಡಿದ ವರದಿಯಲ್ಲಿ ಮಾಡಲಾಗಿರುವ ಎಲ್ಲಾ ಆರೋಪಗಳು ಶ್ರೀನಿವಾಸನ್ ಅವರ ಗಮನಕ್ಕೆ ತರಲಾಗಿತ್ತಾದರೂ ಅದನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ಅಲ್ಲದೇ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಹಾಗಾಗಿ ಬಿಸಿಸಿಐ ಈ ಕುರಿತು ಸರಿಯಾದ ರೀತಿಯಲ್ಲಿ ತನಿಖೆ ನಡೆಸಬೇಕು ಎಂದು ಎ.ಕೆ ಪಟ್ನಾಯಕ್ ಹಾಗೂ ಎಫ್.ಎಮ್ ಇಬ್ರಾಹಿಮ್ ಪೀಠ ತಿಳಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.