ಯುಎಸ್ಎ ಕರಾಟೆ: ಭಾರತಕ್ಕೆ 8 ಪದಕ
ನವದೆಹಲಿ: ಅತ್ಯುತ್ತಮ ಪ್ರದರ್ಶನ ನೀಡಿರುವ ಭಾರತದ ಕರಾಟೆಪಟುಗಳು ಲಾಸ್ ವೆಗಾಸ್ನಲ್ಲಿ ನಡೆದ ಯುಎಸ್ಎ ಓಪನ್ ಕರಾಟೆ ಚಾಂಪಿಯನ್ಶಿಪ್ನಲ್ಲಿ 8 ಪದಕಗಳನ್ನು ಬಾಚಿಕೊಂಡಿದ್ದಾರೆ.
ಏ.18ರಿಂದ 21ರವರೆಗೆ ನಡೆದ ಈ ಚಾಂಪಿಯನ್ಶಿಪ್ನಲ್ಲಿ ಭಾರತಕ್ಕೆ 2 ಚಿನ್ನ ಹಾಗೂ 6 ಕಂಚಿನ ಪದಕಗಳು ಲಭಿಸಿದೆ. ಭಾರತತಂಡ 8 ಕರಾಟೆಪಟುಘಲ ತಂಡ ಈ ಪಂದ್ಯಾವಳಿಯಲ್ಲಿ ಭಾಗವಹಿಸಿತ್ತು. 15 ರಾಷ್ಟ್ರಗಳಿಂದ 3 ಸಾವಿರಕ್ಕೂ ಹೆಚ್ಚಿನ ಕರಾಟೆ ಪಟುಗಳು ಭಾಗವಹಿಸಿದ್ದರು.
ಮಹಗಿಳೆಯರ ವಿಭಾಗದಲ್ಲಿ ಮುಂಬೈನ ಕಾರ್ಲ್ ವಾಟ್ಚಾ ಒಂದು ಚಿನ್ನ ಹಾಗೂ ಒಂದು ಕಂಚಿನ ಪದಕ, ಮುಂಬೈನ ತೊಯೆಶಾ ಖಟಾವ್ ಒಂದು ಚಿನ್ನ ಹಾಗೂ ಮೂರು ಕಂಚಿನ ಪದಕ ಪಡೆದರು.
ಪುರುಷರ ವಿಭಾಗದಲ್ಲಿ ದೆಹಲಿಯ ಪ್ರಣಯ್ ಶರ್ಮಾ, ಮುಂಬೈನ ಆಕಾಶ್ ಸಮೀರ್, ತಲಾ ಒಂದು ಕಂಚಿನ ಪದಕ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

