ಯೂತ್ ಒಲಿಂಪಿಕ್ಸ್ಗೆ ಗೌರವ್ ಸೋಲಂಕಿ
ನವದೆಹಲಿ: ಏಷ್ಯನ್ ಚಾಂಪಿಯನ್ ಬಾಕ್ಸರ್ ಗೌರವ್ ಸೋಲಂಕಿ (52ಕೆಜಿ) ಅವರು ಯೂತ್ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಅರ್ಹತೆ ಪಡೆದುಕೊಂಡಿದ್ದಾರೆ. ಬ್ರೆಜಿಲ್ನ ಕಾರ್ಲೋಸ್ ಸಿಲ್ವಾ ವಿರುದ್ಧ ಜಯ ಸಾಧಿಸುವ ಮೂಲಕ ಸೋಲಂಕಿ, ಒಲಿಂಪಿಕ್ಸ್ಗೆ ಅರ್ಹತೆ ಪಡೆಯಲು ಸಿಕ್ಕಿದ್ದ ಕೊನೆಯ ಅವಕಾಶವನ್ನು ಸದುಪಯೋಗಪಡಿಸಿಕೊಂಡರು.
ಹರ್ಯಾಣದ ಸೋಲಂಕಿ ಅವರು ಬಲ್ಗೇರಿಯಾದ ಸೋಫಿಯಾದಲ್ಲಿ ನಡೆದ ಯೂತ್ ಬಾಕ್ಸಿಂಗ್ ವಿಶ್ವ ಚಾಂಪಿಯನ್ಶಿಪ್ನ ಮಹತ್ವದ ಪಂದ್ಯದಲ್ಲಿ ಬ್ರೆಜಿಲ್ ಆಟಗಾರನ ವಿರುದ್ಧ 2-1 ಅಂಕಗಳಿಂದ ಜಯ ಕಂಡುಕೊಂಡರು. ಈ ಮುನ್ನ ಇದೇ ಪಂದ್ಯಾವಳಿಯಲ್ಲಿ ಯೂತ್ ಒಲಿಂಪಿಕ್ಸ್ಗೆ ಅರ್ಹತೆ ಪಡೆದುಕೊಳ್ಳುವ ಅವಕಾಶ ಗಿಟ್ಟಿಸಿದ್ದರು. ಆದರೆ, ಆ ಎರಡೂ ಅವಕಾಶಗಳಲ್ಲಿ ಅವರು ವೈಫಲ್ಯ ಕಂಡಿದ್ದರು.
ಒಂದು ಪದಕ ಮತ್ತು ಎರಡು ಒಲಿಂಪಿಕ್ಸ್ ಅರ್ಹತೆ ಪಡೆಯುವ ಮೂಲಕ ಪಂದ್ಯಾವಳಿಯಲ್ಲಿ ಭಾರತ ತನ್ನ ಹೋರಾಟ ಮುಕ್ತಾಯಗೊಳಿಸಿದೆ. ಶ್ಯಾಮ್ ಕಕಾರಾ (49ಕೆಜಿ) ಪದಕ (ಕಂಚು) ಗೆದ್ದ ಭಾರತದ ಏಕೈಕ ಬಾಕ್ಸರ್ ಎನಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

