ಕ್ರೀಡೆ

ಕಾಮನ್ವೆಲ್ತ್ 10 ಮೀ. ಏರ್‌ರೈಫಲ್‌ಗೆ ಅರ್ಹತೆ ಪಡೆಯಲು ನಾರಂಗ್ ವಿಫಲ

Published On :

ನವದೆಹಲಿ: ಲಂಡನ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಅಭಿನವ್ ಬಿಂದ್ರಾ, 10 ಮೀಟರ್ ಏರ್ ರೈಫಲ್ ವಿಭಾಗದಲ್ಲಿ ಕಾಮನ್ವೆಲ್ತ್ ಕ್ರೀಡಾಕೂಟಕ್ಕೆ ಅರ್ಹತೆ ಪಡೆದುಕೊಂಡಿದ್ದಾರೆ. ಆದರೆ, ಲಂಡನ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದ ಗಗನ್ ನಾರಂಗ್ ಅವರು ಮಹತ್ವದ ಪಂದ್ಯಾವಳಿಗೆ ಈ ವಿಭಾಗದಲ್ಲಿ ಅರ್ಹತೆ ಪಡೆಯುವಲ್ಲಿ ವಿಫಲವಾಗಿದ್ದಾರೆ.
2012ರ ಲಂಡನ್ ಒಲಿಂಪಿಕ್ಸ್ ಕ್ರೀಡಾಕೂಟದ 10 ಮೀಟರ್ ಏರ್ ರೈಫಲ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದುಕೊಂಡಿದ್ದ ನಾರಂಗ್ ಅವರು, ಕೊನೆಯ ಆರು ಸುತ್ತುಗಳಲ್ಲಿ ಗಳಿಸಿದ ಅಂಕ ಸಾಕಾಗಲಿಲ್ಲ. ವಿಶ್ವಕಪ್, ರಾಷ್ಟ್ರೀಯ ಚಾಂಪಿಯನ್‌ಶಿಪ್ ಹಾಗೂ ರಾಷ್ಟ್ರೀಯ ಟ್ರಯಲ್ಸ್ ಸೇರಿದಂತೆ ವೈಫಲ್ಯ ಕಂಡಿದ್ದಾರೆ.
'ಕಾಮನ್ವೆಲ್ತ್ ಕ್ರೀಡಾಕೂಟಕ್ಕೆ ಆರ್ಹತೆ ಪಡೆದುಕೊಳ್ಳುವ ವಿಧಾನ ಇದು' ಎಂದು ರಾಷ್ಟ್ರೀಯ ರೈಫಲ್ ಸಂಸ್ಥೆಯ ಕಾರ್ಯದರ್ಶಿ ರಾಜೀವ್ ಭಾಟಿಯಾ ತಿಳಿಸಿದರು.     ಆದರೆ, ಹೈದರಾಬಾದ್ ಮೂಲದ ನಾರಂಗ್ ಅವರು ಇತರ ಎರಡು ವಿಭಾಗಗಳಲ್ಲಿ ಭಾಗವಹಿಸುತ್ತಿದ್ದಾರೆ. ರಾಷ್ಟ್ರೀಯ ರೈಫಲ್ ಸಂಸ್ಥೆ ರೈಫಲ್ ಮತ್ತು ಪಿಸ್ತೂಲ್ ವಿಭಾಗಗಳಲ್ಲಿ ಜುಲೈ 23ರಿಂದ ಆಗಸ್ಟ್ 3ರವರೆಗೆ ಗ್ಲಾಸ್ಗೋದಲ್ಲಿ ನಡೆಯಲಿರುವ ಕಾಮನ್ವೆಲ್ತ್‌ಗೆ ಭಾರತದ ಆಟಗಾರರನ್ನು ಆಯ್ಕೆ ಮಾಡಿಕೊಂಡಿದೆ.
ಅಲ್ಮಾಟಿಯಲ್ಲಿ ನಡೆಯಲಿರುವ ವಿಶ್ವಕಪ್ ನಂತರ ಕಾನ್ವೆಲ್ತ್ ಗೇಮ್ಸ್‌ನ ಶಾಟ್‌ಗನ್ ತಂಡವನ್ನು ಆಯ್ಕೆ ಮಾಡಲಿದ್ದೇವೆ ಎಂದು ಭಾಟಿಯಾ ತಿಳಿಸಿದರು. ಇನ್ನು 2012ರ ಲಂಡನ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದಿದ್ದ ಸೇನೆಯ ಶೂಟರ್ ವಿಜಯ್ ಕುಮಾರ್ ಅವರು, ಪುರುಷರ 25 ಮೀಟರ್ ರ್ಯಾಪಿಡ್‌ಫೈರ್ ಪಿಸ್ತೂಲ್ ವಿಭಾಗದಲ್ಲಿ ಭಾಗವಹಿಸಲಿದ್ದಾರೆ. ಕಾಮನ್ವೆಲ್ತ್, ಏಷ್ಯನ್ ಗೇಮ್ಸ್ ಹಾಗೂ ವಿಶ್ವಕಪ್ ಕ್ರೀಡಾಕೂಟದಲ್ಲಿ ಹೆಚ್ಚಿನ ಪದಕಗಳನ್ನು ಗೆದ್ದ ನಾರಂಗ್ ಅವರು, ಪುರುಷರ 50 ಮೀಟರ್, 3 ಪೊಷೆಸನ್ ರೈಫಲ್ ಹಾಗೂ 50 ಮೀಟರ್ ಪ್ರೋನ್ ವಿಭಾಗಗಳಲ್ಲಿ ಸಂಜೀವ್ ರಜ್ಪೂತ್ ಹಾಗೂ ಜಾಯ್‌ದೀಪ್ ಕರ್ಮಾಕರ್ ಅವರೊಂದಿಗೆ ಕಾಮನ್ವೆಲ್ತ್‌ನಲ್ಲಿ ಭಾಗವಹಿಸಲಿದ್ದಾರೆ.
ಇನ್ನು ಮಹಿಳೆಯರ ವಿಭಾಗದಲ್ಲಿ ವಿಶ್ವದ ನಂಬರ್ 1 ಶೂಟಿಂಗ್ ತಾರೆ ಹೀನಾ ಸಿಧು ಅವರು ಭಾರತ ತಂಡದ ನಾಯಕತ್ವ ವಹಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.