ಕ್ರೀಡೆ

ಚೆನ್ನೈಗೆ ಸನ್‌ರೈಸರ್ಸ್ ಸವಾಲು

Published On :

ಶಾರ್ಜಾ: ಡೆಲ್ಲಿ ಡೇರ್‌ಡೆವಿಲ್ಸ್ ವಿರುದ್ಧ ಜಯ ಕಾಣುವ ಮೂಲಕ ವಿಶ್ವಾಸ ವೃದ್ಧಿಸಿಕೊಂಡಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡ ಐಪಿಎಲ್‌ನಲ್ಲಿ ಭಾನುವಾರ ನಡೆಯಲಿರುವ ಪಂದ್ಯದಲ್ಲಿ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೆಣಸಲಿದೆ.
ಹೈದರಾಬಾದ್ ತಂಡ ಪಂದ್ಯಾವಳಿಯ ಮೊದಲೆರಡು ಪಂದ್ಯಗಳಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಸೋಲನುಭವಿಸಿತ್ತು. ಆದರೆ, ಮೂರನೇ ಪಂದ್ಯದಲ್ಲಿ ಡೆಲ್ಲಿ ಡೇರ್‌ಡೆವಿಲ್ಸ್ ವಿರುದ್ಧ ಜಯ ಕಾಣುವ ಮೂಲಕ ಗೆಲವಿನ ಹಾದಿ ಹಿಡಿದಿದೆ.
ಆದರೆ, ಈಗ 4ನೇ ಪಂದ್ಯದಲ್ಲಿ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ತಂಡ ಎದುರಾಗಿದ್ದು, ಶಿಖರ್ ಧವನ್ ನಾಯಕತ್ವದ ತಂಡ ಯಾವ ರೀತಿ ಪ್ರದರ್ಶನ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ. ಚೆನ್ನೈ ವಿರುದ್ಧ ಫಿಂಚ್ ಮತ್ತು ವಾರ್ನರ್ ಅವರು ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆಗಳನ್ನು ಹೈದರಾಬಾದ್ ಇಟ್ಟುಕೊಂಡಿದೆ.
ಮಧ್ಯಮ ಕ್ರಮಾಂಕದಲ್ಲಿ ಕೆ.ಎಲ್ ರಾಹುಲ್ ಮತ್ತು ವೇಣುಗೋಪಾಲ್ ರಾವ್ ಇದುವರೆಗೂ ವೈಫಲ್ಯ ಕಂಡಿದ್ದಾರೆ. ಆದರೆ, ಸನ್‌ರೈಸರ್ಸ್‌ನ ಬೌಲಿಂಗ್ ವಿಭಾಗ ಉತ್ತಮವಾಗಿದೆ.
ಇನ್ನೊಂದೆಡೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ವಿರುದ್ಧ ಸೋಲುವ ಮೂಲಕ ಪಂದ್ಯಾವಳಿಯಲ್ಲಿ ತನ್ನ ಹೋರಾಟ ಆರಂಭಿಸಿತ್ತು. ಆದರೆ, ನಂತರ ಡೆಲ್ಲಿ ಡೇರ್‌ಡೆವಿಲ್ಸ್, ರಾಜಸ್ಥಾನ ರಾಯಲ್ಸ್ ಹಾಗೂ ಹಾಲಿ ಚಾಂಪಿಯನ್ ಮುಂಬೈ ವಿರುದ್ಧ ಜಯ ಕಾಣುವ ಮೂಲಕ ಅದ್ಭುತ ಪ್ರದರ್ಶನ ತೋರುತ್ತಿದ್ದು, ಹೈದರಾಬಾದ್ ವಿರುದ್ಧ ಜಯ ಕಾಣುವ ಕಾತರದಲ್ಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.