ಕ್ರೀಡೆ

ಏಷ್ಯನ್ ಗೇಮ್ಸ್‌ಗೆ ಭಾರತ ಕ್ರಿಕೆಟ್ ತಂಡ ಗೈರು

Published On :

ಮುಂಬೈ: ಬಿಡುವಿಲ್ಲದ ವೇಳಾಪಟ್ಟಿ ಹಾಗೂ ಏಷ್ಯಾ ಕ್ರಿಕೆಟ್ ಸಮಿತಿಯ ನಿರ್ಲಕ್ಷ್ಯದಿಂದ ಮುಂಬರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಹಾಗೂ ಪುರುಷರ ಕ್ರಿಕೆಟ್ ತಂಡ ಭಾಗವಹಿಸದಿರಲು ನಿರ್ಧರಿಸಿದೆ.
2014ರ ಏಷ್ಯನ್ ಕ್ರೀಡಾಕೂಟಕ್ಕೆ ಶ್ರೀಲಂಕಾ ಹಾಗೂ ಬಾಂಗ್ಲಾದೇಶಗಳು ತಮ್ಮ ಪುರುಷರ ಹಾಗೂ ಮಹಿಳಾ ತಂಡಗಳನ್ನು ಕಳುಹಿಸುತ್ತಿವೆ. ಇನ್ನು ಪಾಕಿಸ್ತಾನ ಕೇವಲ ಮಹಿಳಾ ತಂಡವನ್ನು ಕಳುಹಿಸಲಿದೆ ಎಂದು ಕ್ರೀಡಾಕೂಟದ ಫೇಸ್‌ಬುಕ್ ಫೇಜ್‌ನಲ್ಲಿ ಪ್ರಕಟಿಸಲಾಗಿದೆ.
ಭಾರತ ಈಗಾಗಲೇ ನಾಲ್ಕು ವರ್ಷಗಳಿಗೊಮ್ಮೆ ನಡೆಯಲಿರುವ ಏಷ್ಯಾ ಕ್ರೀಡಾಕೂಟಕ್ಕೆ ತಂಡವನ್ನು ಕಳುಹಿಸದಿರಲು ನಿರ್ಧರಿಸಿದೆ. ಏಷ್ಯಾ ಕ್ರೀಡಾಕೂಟದಲ್ಲಿ ಕ್ರಿಕೆಟ್ ಕ್ರೀಡೆಯನ್ನು ಕಳೆದ ಬಾರಿಯ ಆವೃತ್ತಿಯಿಂದ ಅಳವಡಿಸಿಕೊಂಡಿದ್ದು, ಭಾರತ ಕಳೆದ ಬಾರಿಯೂ ಭಾಗವಹಿಸಿರಲಿಲ್ಲ.
ಈ ಬಾರಿಯ ಏಷ್ಯನ್ ಕ್ರೀಡಾಕೂಟದಲ್ಲಿ ಸೆ.20ರಿಂದ ಅಕ್ಟೋಬರ್ 3ರವರೆಗೆ ಕ್ರಿಕೆಟ್ ಪಂದ್ಯಗಳು ನಡೆಯಲಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.