ಏಷ್ಯನ್ ಗೇಮ್ಸ್: ಭಾರತ ಟೆನಿಸ್ ತಂಡಕ್ಕೆ ಪೇಸ್, ಸಾನಿಯಾ ಸಾರಥ್ಯ

ನವದೆಹಲಿ: ಆಯ್ಕೆ ಸಮಿತಿಯ ವಿಶ್ವಾಸ ಉಳಿಸಿಕೊಳ್ಳುವಲ್ಲಿ 40 ವರ್ಷದ ಹಿರಿಯ ಟೆನಿಸ್ ತಾರೆ ಲಿಯಾಂಡರ್ ಪೇಸ್ ಯಶಸ್ವಿಯಾಗಿದ್ದಾರೆ. ಹೀಗಾಗಿ, ಏಷ್ಯನ್ ಗೇಮ್ಸ್ಗೆ ತೆರಳಲಿರುವ ಭಾರತ ಟೆನಿಸ್ ತಂಡಕ್ಕೆ ಸಾನಿಯಾ ಮಿರ್ಜಾ ಮತ್ತು ರೋಹನ್ ಬೋಪಣ್ಣ ಅವರೊಂದಿಗೆ ಪೇಸ್ ಆಯ್ಕೆಯಾಗಿದ್ದಾರೆ.
ಪೇಸ್ ಮತ್ತು ಸಾನಿಯಾ ಭಾರತ ತಂಡದ ಸಾರಥ್ಯ ವಹಿಸಿಕೊಂಡಿದ್ದಾರೆ. ಸೆಪ್ಟೆಂಬರ್ 19ರಿಂದ ಅಕ್ಟೋಬರ್ 4ರವರೆಗೆ ಕೊರಿಯದಲ್ಲಿ ನಡೆಯಲಿರುವ ಕ್ರೀಡಾಕೂಟಕ್ಕೆ ಆಯ್ಕೆ ಸಮಿತಿ 12 ಸದಸ್ಯರ ತಂಡವನ್ನು ಶನಿವಾರ ಪ್ರಕಟಿಸಿದೆ.
ತಂಡದಲ್ಲಿ ಕಳೆದ ಬಾರಿ ಚಿನ್ನದ ಪದಕ ಗೆದ್ದ ಸೋಮ್ದೇವ್ ದೇವ್ವರ್ಮನ್ ಮತ್ತು ಸನಮ್ ಸಿಂಗ್ ಸಹ ಇದ್ದಾರೆ. ಪುರುಷರ ಸಿಂಗಲ್ಸ್ನಲ್ಲಿ ಚಿನ್ನ ಗೆದ್ದಿದ್ದ ಸೋಮ್ದೇವ್, ಪುರುಷರ ಡಬಲ್ಸ್ನಲ್ಲಿ ಸನಮ್ ಸಿಂಗ್ ಜತೆ ಸೇರಿ ಚಿನ್ನದ ಪದಕ ಗೆದ್ದುಕೊಂಡಿದ್ದರು.
ಉತ್ತಮ ಪ್ರದರ್ಶನ ನೀಡುತ್ತಿರುವ ಸಾಕೆತ್ ಮೈನೆನಿ ಮತ್ತು ಯೂಕಿ ಭಾಂಬ್ರಿ ಅವರು ಇದೇ ಮೊದಲ ಬಾರಿಗೆ ಪ್ರತಿಷ್ಠಿತ ಕ್ರೀಡಾಕೂಟಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.
'ಪೇಸ್ ಅವರು ಭಾರತ ತಂಡದ ದೊಡ್ಡ ಸ್ಟಾರ್ ಆಟಗಾರ. ಗ್ರಾನ್ ಸ್ಲಾಮ್ ಪಂದ್ಯಾವಳಿಗಳಲ್ಲಿ ಪೇಸ್ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಹೀಗಾಗಿಯೇ ಅವರಿಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ' ಎಂದು ರಾಷ್ಟ್ರೀಯ ಆಯ್ಕೆ ಸಮಿತಿ ಮುಖ್ಯಸ್ಥ ಅನಿಲ್ ಧೂಪರ್ ಅವರು ಸಮರ್ಥಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


