ನಿಷೇಧ ಹೇರಿದ್ದರೆ ಬೆಳ್ಳಿ ಬರುತ್ತಿತ್ತೇ?: ಜ್ವಾಲಾ

ಗ್ಲಾಸ್ಗೋ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಕರ್ನಾಟಕದ ಅಶ್ವಿನಿ ಪೊನ್ನಪ್ಪ ಅವರೊಂದಿಗೆ ಬೆಳ್ಳಿ ಪದಕ ಗೆದ್ದಿರುವ ಜ್ವಾಲಾ ಗುಟ್ಟಾ ಅವರು ತಮ್ಮ ಸಾಧನೆ ಕುರಿತು ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಭಾರತೀಯ ಬ್ಯಾಡ್ಮಿಂಟನ್ ಸಂಸ್ಥೆ ನನ್ನ ಮೇಲೆ ನಿಷೇಧ ಹೇರಿದ್ದರೆ ಇಂದು ಭಾರತ ಬೆಳ್ಳಿ ಪದಕ ಗೆಲ್ಲಲು ಸಾಧ್ಯವಾಗುತ್ತಿತ್ತೇ? ಎಂದು ಸಹ ಜ್ವಾಲಾ ಪ್ರಶ್ನಿಸಿದ್ದಾರೆ.
ನನ್ನ ಮೇಲೆ ಆಜೀವ ನಿಷೇಧ ಹೇರಲು ಕೆಲವರು ಒತ್ತಾಯಿಸಿದರು. ಕಳೆದ ಅಕ್ಟೋಬರ್ ತಿಂಗಳಲ್ಲಿ ನಡೆದ ಭಾರತೀಯ ಬ್ಯಾಡ್ಮಿಂಟನ್ ಲೀಗ್ನಲ್ಲಿ ನನ್ನ ತಂಡದ ಸಹ ಆಟಗಾರರು ಆಡದಂತೆ ತಡೆಯಲು ಸಹ ಯತ್ನಿಸಲಾಯಿತು.
'ನಾನು ಹೇಳಿಕೆ ನೀಡಿದ ಕುರಿತು ನನಗೆ ಸಂತಸವಿದೆ. ಅಲ್ಲದೆ, ನಾನು ಇಲ್ಲಯೇ ಇರುತ್ತೇನೆ. ಯಾರೂ ನನ್ನನ್ನು ತಡೆಯುವಂತಿಲ್ಲ. ಪ್ರತಿಷ್ಠಿತ ಪಂದ್ಯಾವಳಿಗಳಲ್ಲಿ ಪದಕಗಳನ್ನು ಗೆಲ್ಲುವುದು ಸಾಮಾನ್ಯ ವಿಷಯವಲ್ಲ. ಅದು ಯಾವುದೇ ಪದಕವಾಗಿರಬಹುದು. ಸತತ ಎರಡು ಕಾಮನ್ವೆಲ್ತ್ ಕ್ರೀಡಾಕೂಟಗಳಲ್ಲಿ ನಾನು ಪದಕ ಗೆದ್ದಿರುವುದು ನನಗೆ ಹೆಮ್ಮೆ ಮೂಡಿಸಿದೆ. ನನ್ನ ಕುಟುಂಬ ಮತ್ತು ಸ್ನೇಹಿತರು ಈ ಸಂತಸದ ಸುದ್ದಿಯನ್ನು ಹಂಚಿಕೊಳ್ಳಲಿದ್ದಾರೆ. ನನ್ನನ್ನು ಬೆಂಬಲಿಸಿದ ಎಲ್ಲರಿಗೂ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಕಳೆದ ಬಾರಿ ಡೆಲ್ಲಿಯಲ್ಲಿ ನಾವು ಚಿನ್ನದ ಪದಕ ಗೆದ್ದುಕೊಂಡಿದ್ದೆವು. ಆದರೆ, ಈ ಬಾರಿ ಸಹ ಫೈನಲ್ ಪ್ರವೇಶಿಸುವಲ್ಲಿ ಯಶಸ್ವಿಯಾಗಿದ್ದೆವು. ಆದರೆ, ಚಿನ್ನದ ಪದಕ ಗೆಲ್ಲಲು ಸಾಧ್ಯವಾಗಲಿಲ್ಲ' ಎಂದಿದ್ದಾರೆ ಜ್ವಾಲಾ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


