ವಿಶ್ವ ಸ್ಪರ್ಧೆ, ಏಷ್ಯಾಡ್‌ನಲ್ಲಿ ಪದಕದ ಗುರಿ

ಹೈದರಾಬಾದ್: ಗ್ಲಾಸ್ಗೋ ಕಾಮನ್‌ವೆಲ್ತ್ ಕ್ರೀಡಾಕೂಟದ ಬ್ಯಾಡ್ಮಿಂಟನ್ ವಿಭಾಗದಲ್ಲಿ ಐತಿಹಾಸಿಕ ಚಿನ್ನದ ಪದಕ ಗೆದ್ದು ತವರಿಗೆ ಹಿಂತಿರುಗಿರುವ ಪರುಪಳ್ಳಿ ಕಶ್ಯಪ್, ಮುಂಬರುವ ವಿಶ್ವ ಚಾಂಪಿಯನ್‌ಶಿಪ್ ಮತ್ತು ಏಷ್ಯನ್ ಕ್ರೀಡಾಕೂಟಗಳಲ್ಲೂ ಪದಕ ಗೆದ್ದುಕೊಳ್ಳುವ ಗುರಿ ಹೊಂದಿದ್ದಾರೆ.
ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಬ್ಯಾಡ್ಮಿಂಟನ್ ಸ್ಪರ್ಧೆಯ ಪುರುಷರ ಸಿಂಗಲ್ಸ್‌ನಲ್ಲಿ 32 ವರ್ಷಗಳ ನಂತರ ಭಾರತಕ್ಕೆ ಚಿನ್ನದ ಪದಕ ಲಭಿಸಲು ಕಾರಣರಾಗಿದ್ದ ಕಶ್ಯಪ್, ಈ ಸಾಧನೆ ಮುಂದುವರಿಸಿಕೊಂಡು ಹೋಗುವ ವಿಶ್ವಾಸ ಹೊಂದಿದ್ದಾರೆ.
ನಾನು ಸದಾ ಕಿರು ಅವಧಿಗಾಗಿ ಗುರಿ ಇಟ್ಟುಕೊಂಡಿರುತ್ತೇನೆ. ಈಗ ಮುಂದಿನ ತಿಂಗಳು ನಡೆಯಲಿರುವ ವಿಶ್ವ ಚಾಂಪಿಯನ್‌ಶಿಪ್ ಹಾಗೂ ಏಷ್ಯನ್ ಗೇಮ್ಸ್ ನನ್ನ ಆದ್ಯತೆ. ಈ ಎರಡೂ ಟೂರ್ನಿಗಳಿಗೆ ಉತ್ತಮ ರೀತಿಯಲ್ಲಿ ಅಣಿಯಾಗಬೇಕಿದೆ ಎಂದು 27ರ ಕಶ್ಯಪ್ ಪ್ರತಿಕ್ರಿಯಿಸಿದ್ದಾರೆ. ಈ ಹಿಂದೆ 1978ರಲ್ಲಿ ಪ್ರಕಾಶ್ ಪಡುಕೋಣೆ ಹಾಗೂ 1982ರಲ್ಲಿ ಸೈಯದ್ ಮೋದಿ ಮಾತ್ರ ಕಾಮನ್‌ವೆಲ್ತ್‌ನಲ್ಲಿ ಸಿಂಗಲ್ಸ್ ವಿಭಾಗದಲ್ಲಿ ಸ್ವರ್ಣ ಸಂಪಾದಿಸಿದ್ದರು. ಈಗ ಇವರ ಸಾಲಿಗೆ ಕಶ್ಯಪ್ ಸೇರ್ಪಡೆಯಾಗಿದ್ದಾರೆ.
2012ರ ಲಂಡನ್ ಒಲಿಂಪಿಕ್ಸ್‌ನಲ್ಲಿ ಕ್ವಾರ್ಟರ್‌ಫೈನಲ್ ತಲುಪಿ ಐತಿಹಾಸಿಕ ಸಾಧನೆ ಮಾಡಿದ್ದ ಹೈದರಾಬಾದ್ ಮೂಲದ ಆಟಗಾರ, ಗ್ಲಾಸ್ಗೋದಲ್ಲಿ ಚಿನ್ನದ ಪದಕ ಗೆದ್ದಿರುವುದು ಹೆಮ್ಮೆ ತಂದಿದೆ. ಇದು ಜೀವಮಾನದ ದೊಡ್ಡ ಸಾಧನೆಯಾಗಿದೆ ಎಂದಿದ್ದಾರೆ.
ತಮ್ಮ ಮೇಲೆ ಸಾಕಷ್ಟು ಒತ್ತಡವಿದ್ದು, ಇಂತಹ ಪರಿಸ್ಥಿತಿಗಳಲ್ಲಿ ಉತ್ತಮ ಆಟ ಪ್ರದರ್ಶಿಸಿದ್ದೇನೆ. ಆಗಸ್ಟ್ 25ರಿಂದಜ ಕೂಪನ್‌ಹೇಗನ್‌ನಲ್ಲಿ ಆರಂಭವಾಗಲಿರುವ ವಿಶ್ವ ಚಾಂಪಿಯನ್‌ಶಿಪ್, ಬಳಿಕ ಸೆಪ್ಟೆಂಬರ್ 19ರಿಂದ ಪ್ರಾರಂಭಲಾಗಲಿರುವ ಏಷ್ಯನ್ ಗೇಮ್ಸ್‌ಗಳಲ್ಲೂ ಉತ್ತಮ ಪ್ರದರ್ಶನ ನೀಡಿ ಪದಕ ಗೆದ್ದುಕೊಂಡು ಬರುವುದಾಗಿ ಕಶ್ಯಪ್ ವಿಶ್ವಾಸದಿಂದ ನುಡಿದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


