ಕ್ರೀಡೆ

ಭಾರತದ ಆತಿಥ್ಯದಲ್ಲಿ 2023ರ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ: ಶ್ರೀನಿವಾಸನ್

ಭಾರತದ ಆತಿಥ್ಯದಲ್ಲಿ 2023ರ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ: ಶ್ರೀನಿವಾಸನ್
Published On :

ನವದೆಹಲಿ: ಭಾರತ ಮುಂದಿನ 8 ವರ್ಷಗಳಲ್ಲಿ ಮೂರು ವಿಶ್ವಮಟ್ಟದ ಕ್ರಿಕೆಟ್ ಟೂರ್ನಿಗಳ ಆತಿಥ್ಯ ವಹಿಸಲಿದೆ ಎಂದು ಐಸಿಸಿ ಅಧ್ಯಕ್ಷ ಶ್ರೀನಿವಾಸನ್ ತಿಳಿಸಿದ್ದಾರೆ.

ಭಾರತ ಈ ಹಿಂದೆ 1987, 1996 ಹಾಗೂ 2011ರಲ್ಲಿ ಏಕದಿನ ವಿಶ್ವಕಪ್ ಆತಿಥ್ಯವನ್ನು ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ, ಶ್ರೀಲಂಕಾ ಹಾಗೂ ಬಾಂಗ್ಲಾದೇಶದೊಂದಿಗೆ ಹಂಚಿಕೊಂಡಿತ್ತು. ಈಗ ಭಾರತ ಮುಂದಿನ 2016ರ ಟಿ20 ವಿಶ್ವಕಪ್,2021ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಹಾಗೂ 2023ರ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯನ್ನು ಆಯೋಜಿಸಲಿದೆ.

ಇಷ್ಟು ದಿನಗಳ ಕಾಲ ಭಾರತ 16-18 ವರ್ಷಕ್ಕೆ ಒಮ್ಮೆಯಂತೆ ಐಸಿಸಿ ಟೂರ್ನಿಯನ್ನು ಆಯೋಜಿಸುತ್ತಿತ್ತು. ಅಲ್ಲದೆ ಪ್ರತಿ ಬಾರಿಯೂ ನೆರ ದೇಶಗಳೊಂದಿಗೆ ಸೇರಿ ಪಂದ್ಯಾವಳಿ ಆಯೋಜಿಸಿತ್ತು. ಆದರೆ ಮುಂದಿನ ಎಂಟು ವರ್ಷಗಳಲ್ಲಿ ಭಾರತ ಮೂರು ಪ್ರಮುಖ ಐಸಿಸಿ ಟೂರ್ನಿಗಳನ್ನು ಆಯೋಜಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಎಂದು ಎನ್. ಶ್ರೀನಿವಾಸನ್ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.

ಐಸಿಸಿಯ ಅಧಿಕಾರ ಹಂಚಿಕೆಯಲ್ಲಿ ಪ್ರಭಾವಿ ಕ್ರಿಕೆಟ್ ಸಂಸ್ಥೆಗಳಾದ ಆಸ್ಟ್ರೇಲೀಯಾ, ಇಂಗ್ಲೆಂಡ್ ಹಾಗೂ ಭಾರತ ಮುಂದಿನ ಮೂರು ಏಕದಿನ ವಿಶ್ವಕಪ್ ಪಂದ್ಯಾವಳಿ ಆತಿಥ್ಯ ವಹಿಸಿಕೊಂಡಂತಾಗಿದೆ. 2015ರ ವಿಶ್ವಕಪ್ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ಮತ್ತು 2019ರ ವಿಶ್ವಕಪ್ ಇಂಗ್ಲೆಂಡ್‌ನಲ್ಲಿ ನಡೆಯಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.