ಕ್ರೀಡೆ

ಬ್ಯಾಟಿಂಗ್ ವೈಫಲ್ಯ ಸಮಸ್ಯೆಯಾಗಿದೆ: ಧೋನಿ

ಬ್ಯಾಟಿಂಗ್ ವೈಫಲ್ಯ ಸಮಸ್ಯೆಯಾಗಿದೆ: ಧೋನಿ
Published On :

ಮ್ಯಾಂಚೆಸ್ಟರ್: ಭಾರತ ತಂಡ ಇಂಗ್ಲೆಂಡ್ ವಿರುದ್ಧದ ಕಳೆದೆರಡು ಪಂದ್ಯಗಳಲ್ಲಿ ಹೀನಾಯ ಸೋಲನುಭವಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಾಯಕ ಮಹೇಂದ್ರ ಸಿಂಗ್ ಧೋನಿ, ತಂಡದ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ವೈಫಲ್ಯ ತಂಡಕ್ಕೆ ಹೆಚ್ಚು ಸಮಸ್ಯೆಯಾಗಿ ಪರಿಣಮಿಸಿದೆ ಎಂದು ತಿಳಿಸಿದ್ದಾರೆ.

ಓಲ್ಡ್ ಟ್ರಾಫರ್ಡ್‌ನಲ್ಲಿ ಶನಿವಾರ ಮುಕ್ತಾಯಗೊಂಡ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತ ಇನಿಂಗ್ಸ್ ಹಾಗೂ 54 ರನ್‌ಗಳ ಹೀನಾಯ ಸೋಲನುಭವಿಸಿತು. ಪಂದ್ಯದ ನಂತರ ಮಾತನಾಡಿದ ಧೋನಿ, ಪಂದ್ಯದಲ್ಲಿ ಹೆಚ್ಚು ರನ್ ಗಳಿಸುವುದು ಎಲ್ಲಕ್ಕಿಂತ ಪ್ರಮುಖವಾದ ಅಂಶವಾಗಿದೆ.

ಲಾರ್ಡ್ಸ್ ಪಂದ್ಯದಲ್ಲಿ ತಂಡದ ಎಂಟು, ಒಂಬ್ಬತ್ತು, ಹತ್ತು ಹಾಗೂ ಹನ್ನೊಂದನೇ ಕ್ರಮಾಂಕದ ಬಾಟ್ಸ್‌ಮನ್‌ಗಳು ಹೆಚ್ಚು ಪ್ರಮಾಣದಲ್ಲಿ ರನ್ ಗಳಿಸಿದ್ದು, ತಂಡದ ಸಮಸ್ಯೆಯನ್ನು ಮರೆಮಾಚಿತ್ತು. ತಂಡದಲ್ಲಿ ಐವರು ಬೌಲರ್‌ಗಳನ್ನು ತಂಡದಲ್ಲಿ ಕಣಕ್ಕಿಳಿಸುವುದರಿಂದ ತಂಡ ಒಬ್ಬ ಪ್ರಮುಖ ಬ್ಯಾಟ್ಸ್‌ಮನ್ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಅಂತಹ ಸಮಯದಲ್ಲಿ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಅತ್ಯುತ್ತಮ ಪ್ರದರ್ಶನ ನೀಡಬೇಕಾದ ಜವಾಬ್ದಾರಿ ಹೊರಬೇಕಿದೆ ಎಂದು ತಿಳಿಸಿದರು.

ಮೊದಲ ಪಂದ್ಯದಲ್ಲಿ ಸ್ಟುವರ್ಟ್ ಬಿನ್ನಿ, ಶಮಿ, ಭುವನೇಶ್ವರ್ ಜತೆಗೂಡಿ ತಂಡವನ್ನು ಪಾರು ಮಾಡಿದ್ದರು ಹಾಗಾಗಿ ಹೆಚ್ಚಿನ ಸಮಸ್ಯೆ ಎದುರಾಗಲಿಲ್ಲ. ಒಬ್ಬ ಬ್ಯಾಟ್ಸ್‌ಮನ್ ಕಡಿಮೆಯಾದ ನಂತರ ಹಾಗೂ ತಂಡದಲ್ಲಿ ಬ್ಯಾಟ್ಸ್‌ಮನ್‌ಗಳು 20-25 ಓವರ್‌ಗಳವರೆಗೂ ಎಚ್ಚರಿಕೆಯ ಬ್ಯಾಟಿಂಗ್ ನಡೆಸಬೇಕು. ಚೆಂಡು ಹಳೇಯದಾದ ನಂತರ ಬ್ಯಾಟ್ಸ್‌ಮನ್‌ಗಳು ಆರಂಭದಲ್ಲೇ ದುಬಾರಿ ಹೊಡೆತಕ್ಕೆ ಮುಂದಾಗುವುದು ವಿಕೆಟ್ ಕಳೆದುಕೊಳ್ಳಲು ಪ್ರಮುಖ ಕಾರಣವಾಗಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.