ವನಿತೆಯರಿಗೆ ಜಯ

ವೊರ್ಮ್ಸ್ಲಿ: ಒಂದೆಡೆ ಭಾರತ ಪುರುಷರ ತಂಡ ಇಂಗ್ಲೆಂಡ್ ಪ್ರವಾಸದಲ್ಲಿ ಹೀನಾಯ ಸೋಲನುಭವಿಸುತ್ತಿದ್ದರೆ, ಮತ್ತೊಂದೆಡೆ ವನಿತೆಯರ ತಂಡ ಇಂಗ್ಲೆಂಡ್ ನೆಲದಲ್ಲಿ ನಡೆದ ಏಕೈಕ ಟೆಸ್ಟ್ ಪಂದ್ಯದಲ್ಲಿ ಗೆಲವು ದಾಖಲಿಸಿ ಸಂಭ್ರಮಿಸಿದೆ.
ಪಂದ್ಯದ ನಾಲ್ಕನೇ ಹಾಗೂ ಅಂತಿಮ ದಿನವಾದ ಶನಿವಾರ ಭಾರತ ತನ್ನ ಬ್ಯಾಟಿಂಗ್ ಮುಂದುವರಿಸಿ 4 ವಿಕೆಟ್ ಕಳೆದುಕೊಂಡು 183 ರನ್ ದಾಖಲಿಸುವ ಮೂಲಕ ಗೆಲವಿನ ದಡ ಸೇರಿತು. ಪಂದ್ಯದ ಮೂರನೇ ದಿನ ಇಂಗ್ಲೆಂಡ್ ವನಿತೆಯರನ್ನು 2ನೇ ಇನಿಂಗ್ಸ್ 202 ರನ್ಗಳಿಗೆ ಆಲೌಟ್ ಮಾಡಿದ್ದ ಭಾರತ, ದಿನದಾಟ ಮುಕ್ತಾಯದ ವೇಳೆಗೆ 4 ವಿಕೆಟ್ ಕಳೆದುಕೊಂಡು 119 ರನ್ ದಾಖಲಿಸಿ ಗೆಲವಿನ ಸನಿಹಕ್ಕೆ ಬಂದು ನಿಂತಿತ್ತು. ನಾಲ್ಕನೇ ದಿನ ಬ್ಯಾಟಿಂಗ್ ಮುಂದುವರಿಸಿದ ಮಿಥಾಲಿ ರಾಜ್ ನೇತೃತ್ವದ ತಂಡ, ದಿನದಾಟದಲ್ಲಿ ವಿಕೆಟ್ ಕಳೆದುಕೊಳ್ಳದೆ ಗುರಿ ಮುಟ್ಟಿತು.
ಭಾರತದ ಪರ ದಿನದಾಟ ಆರಂಭಿಸಿದ ಮಿಥಾಲಿ ರಾಜ್ ಹಾಗೂ ಶಿಖಾ ಪಾಂಡೆ ತಾಳ್ಮೆಯ ಆಟ ಪ್ರದರ್ಶಿಸಿ ತಂಡವನ್ನು ಜಯದ ಹಾದಿಯಲ್ಲಿ ಕೊಂಡೋಯ್ದರು. ಮಿಥಾಲಿ ರಾಜ್ 4 ಬೌಂಡರಿಗಳ ನೆರವಿನಿಂದ ಅಜೇಯ 50 ರನ್ ದಾಖಲಿಸಿದರೆ, ಶಿಖಾ ಪಾಂಡೆ 2 ಬೌಂಡರಿ ನೆರವಿನಿಂದ ಅಜೇಯ 28 ರನ್ ದಾಖಲಿಸಿದರು. ಈ ಮೂಲಕ ಭಾರತ ಎಂಟು ವರ್ಷಗಳ ನಂತರ ಇಂಗ್ಲೆಂಡ್ ವಿರುದ್ಧ ಆಡಿದ ಮೊದಲ ಟೆಸ್ಟ್ ಪಂದ್ಯದಲ್ಲೇ ಗೆಲವು ದಾಖಲಿಸಿದೆ.
ಸಂಕ್ಷಿಪ್ತ ಸ್ಕೋರ್:
ಇಂಗ್ಲೆಂಡ್ 92 ಮತ್ತು 202
ಭಾರತ 114 ಮತ್ತು 4 ವಿಕೆಟ್ 183
(ಮಿಥಾಲಿ ರಾಜ್ ಅಜೇಯ 50, ಸ್ಮೃತಿ ಮಂಧಾನ 51, ಕೇಟ್ ಕ್ರಾಸ್ 43ಕ್ಕೇ 3)
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


