ಪದ್ಮಭೂಷಣ ಪ್ರಶಸ್ತಿಗೆ ಸೈನಾ ಹೆಸರು ಶಿಫಾರಸು

ಹೈದರಾಬಾದ್: ಭಾರತದ ಬ್ಯಾಡ್ಮಿಂಟನ್ ಸಂಸ್ಥೆ(ಬಿಎಐ), ಶಟಲ್ ಕ್ವೀನ್ ಸೈನಾ ನೆಹವಾಲ್ ಅವರ ಹೆಸರನ್ನು ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಗಾಗಿ ಶಿಫಾರಸು ಮಾಡಿದೆ.
ನಾಗರಿಕ ಪುರಸ್ಕಾರವಾದ ಪದ್ಮಭೂಷಣಗೆ ಪ್ರತಿಭಾನ್ವಿತ ಆಟಗಾರ್ತಿ ಸೈನಾ ಹೆಸರು ಶಿಫಾರಸು ಮಾಡಲಾಗಿದೆ ಎಂದು ಬಿಎಐ ಮೂಲಗಳು ತಿಳಿಸಿವೆ. ಒಲಿಪಿಂಕ್ಸ್ನಲ್ಲಿ ಪದಕ ಗೆದ್ದ ಭಾರತದ ಏಕೈಕ ಬ್ಯಾಡ್ಮಿಂಟನ್ ಆಟಗಾರ್ತಿಯಾಗಿರುವ ಹೈದರಾಬಾದ್ನ ಸೈನಾ, ಈ ಮುನ್ನ 2009-10ರಲ್ಲಿ ಪ್ರತಿಷ್ಠಿತ ರಾಜೀವ್ ಗಾಂಧಿ ಖೇರ್ ರತ್ನ ಹಾಗೂ 2009ರಲ್ಲಿ ಅರ್ಜುನ ಪ್ರಶಸ್ತಿ ಮತ್ತು 2010ರಲ್ಲಿ ಪದ್ಮಶ್ರೀ ಗೌರವ ಕೂಡ ಪಡೆದುಕೊಂಡಿದ್ದಾರೆ.
ಈಗ ಸೈನಾಗೆ ಪದ್ಮಭೂಷಣ ಪುರಸ್ಕಾರಕ್ಕಾಗಿ ಕ್ರೀಡಾ ಸಚಿವಾಲಯಕ್ಕೆ ಶಿಫಾರಸು ಕಳುಹಿಸಿಕೊಡಲಾಗಿದ್ದು, ಬಳಿಕ ಗೃಹ ಸಚಿವಾಲಯಕ್ಕೆ ಕಳುಹಿಸಲಾಗುತ್ತದೆ. ಪ್ರೀಮಿಯರ್, ಸೂಪರ್ ಸಿರೀಸ್ ಮತ್ತು ಗ್ರ್ಯಾಂಡ್ ಪ್ರೀ ಗೋಲ್ಡ್ ಪ್ರಶಸ್ತಿಗಳನ್ನು ಗೆದ್ದುಕೊಂಡಿರುವ ಏಕೈಕ ಭಾರತೀಯಳು ಕೂಡ ಸೈನಾ ಆಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


