ಮಳೆಯಾಟ: ಭಾರತ-ಇಂಗ್ಲೆಂಡ್ ಮೊದಲ ಏಕದಿನ ರದ್ದು

ಬ್ರಿಸ್ಟಲ್: ಆತಿಥೇಯ ಇಂಗ್ಲೆಂಡ್ ಮತ್ತು ಭಾರತ ತಂಡಗಳ ನಡುವಿನ ಐದು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಸಂಪೂರ್ಣ ಮಳೆ ಆಹುತಿಯಾಗಿದೆ.
ಬ್ರಿಸ್ಟಲ್ನ ಕೌಂಟಿ ಮೈದಾನದಲ್ಲಿ ಸೋಮವಾರ ಪಂದ್ಯ ನಡೆಯಬೇಕಿತ್ತು. ಆದರೆ ಕಳೆದ ರಾತ್ರಿಯಿಂದ ಬಿಡುವಿಲ್ಲದೆ ಸುರಿದ ಮಳೆಯಿಂದಾಗಿ ರದ್ದುಗೊಳ್ಳುವಂತಾಯಿತು. ಟಾಸ್ ಕೂಡ ಸಾಧ್ಯವಾಗಲಿಲ್ಲ.
ಮಳೆಯಿಂದ ರಕ್ಷಿಸಲು ಪಿಚ್ ಮೇಲೆ ಪೂರ್ಣ ಹೊದಿಕೆ ಹಾಕಲಾಗಿತ್ತು. ಬೆಳಗ್ಗೆ ಮಳೆಯ ಅಬ್ಬರ ಕೊಂಚ ತಗ್ಗಿದಾಗ ಸೂಪರ್ ಸಾಪರ್ ಮೂಲಕ ನೀರು ತೆಗೆಯುವ ಪ್ರಯತ್ನ ಮಾಡಲಾಯಿತು. ಆದರೂ ಆಗಾಗ ಮಳೆ ಸುರಿಯುತ್ತಲೇ ಇದ್ದುದರಿಂದ ಪಂದ್ಯ ನಡೆಯುವುದು ಸಾಧ್ಯವಾಗಿರಲಿಲ್ಲ. ಹಾಗಾಗಿ ಮೈದಾನದ ಅಂಪೈರ್ಗಳಾದ ಇಂಗ್ಲೆಂಡ್ನ ರಾಬ್ ಬೇಲಿ ಮತ್ತು ಆಸ್ಟ್ರೇಲಿಯಾದ ಪಾಲ್ ರಿಫೇಲ್ ಅವರು ಮಧ್ಯಾಹ್ನ 1.30ಕ್ಕೆ ಪಂದ್ಯ ರದ್ದುಪಡಿಸುವ ನಿರ್ಧಾರ ಪ್ರಕಟಿಸಿದರು.
ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-3 ಅಂತರದಲ್ಲಿ ದಯನೀಯವಾಗಿ ಸೋಲುವ ಮೂಲಕ ಮುಖಭಂಗ ಅನುಭವಿಸಿದ್ದ ಮಹೇಂದ್ರ ಸಿಂಗ್ ಧೋನಿ ಪಡೆ, ಏಕದಿನ ಸರಣಿಯಲ್ಲಾದರೂ ಉತ್ತಮ ಪ್ರದರ್ಶನ ನೀಡುವ ವಿಶ್ವಾಸದಲ್ಲಿದೆ. ಅಭ್ಯಾಸ ಪಂದ್ಯದಲ್ಲಿ ಮಿಡಲ್ಸೆಕ್ಸ್ ತಂಡದ ವಿರುದ್ಧ ಜಯ ಸಾಧಿಸುವ ಮೂಲಕ ಏಕದಿನ ಪಂದ್ಯಗಳಿಗೆ ಆತ್ಮ ವಿಶ್ವಾಸ ಹೆಚ್ಚಿಸಿಕೊಂಡಿದ್ದ ಭಾರತೀಯರು ಮೊದಲ ಪಂದ್ಯ ಗೆದ್ದು ಶುಭಾರಂಭ ಮಾಡುವ ತವಕದಲ್ಲಿದ್ದರು. ಆದರೆ ಮಳೆ ಅದಕ್ಕೆ ಅವಕಾಶ ಮಾಡಿಕೊಡಲಿಲ್ಲ. ಎರಡನೇ ಏಕದಿನ ಪಂದ್ಯ ಕಾರ್ಡಿಫ್ನ ಸೋಫಿಯಾ ಗಾರ್ಡನ್ನಲ್ಲಿ ಬರುವ ಬುಧವಾರ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


