ಅಡಿಲೇಡ್ ಟೆಸ್ಟ್: ಶತಕ ಸಿಡಿಸಿ ಕೊಹ್ಲಿ ಔಟ್

ಅಡಿಲೇಡ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಕ್ರಿಕೆಟ್ ಪಂದ್ಯದ ಮೂರನೇ ದಿನ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಆಕರ್ಷಕ ಶತಕ ಸಿಡಿಸಿದ್ದಾರೆ.
ಆಕರ್ಷಕ ಶತಕ ಸಿಡಿಸಿ ಮಿಚೆಲ್ ಜಾನ್ಸನ್‌ಗೆ ವಿಕೆಟ್ ಒಪ್ಪಿಸಿದ ವಿರಾಟ್ ಕೊಹ್ಲಿ
ಆಕರ್ಷಕ ಶತಕ ಸಿಡಿಸಿ ಮಿಚೆಲ್ ಜಾನ್ಸನ್‌ಗೆ ವಿಕೆಟ್ ಒಪ್ಪಿಸಿದ ವಿರಾಟ್ ಕೊಹ್ಲಿ

ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ಅಡಿಲೇಡ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಕ್ರಿಕೆಟ್ ಪಂದ್ಯದ ಮೂರನೇ ದಿನ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಆಕರ್ಷಕ ಶತಕ ಸಿಡಿಸಿದ್ದಾರೆ.

ಅತಿಥೇಯ ತಂಡದ ಬೃಹತ್ ಮೊತ್ತವನ್ನು ಬೆನ್ನುಹತ್ತಿರುವ ಭಾರತ ತಂಡ ಆಸ್ಟ್ರೇಲಿಯಾಗೆ ಉತ್ತಮ ಪೈಪೋಟಿ ನೀಡುತ್ತಿದ್ದು, ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಆಕರ್ಷಕ ಶತಕ ಸಿಡಿಸಿದ್ದಾರೆ. ಒಟ್ಟು 158 ಎಸೆತಗಳನ್ನು ಎದುರಿಸಿದ ಕೊಹ್ಲಿ 12 ಬೌಂಡರಿ ಮತ್ತು ನಾಲ್ಕು ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ. ರಹಾನೆ ಔಟ್ ಆದ ಬಳಿಕ ಕೊಹ್ಲಿ ಅವರನ್ನು ಜೊತೆಗೂಡಿರುವ ಆರ್.ಶರ್ಮಾ ನಾಯಕನಿಗೆ ಉತ್ತಮ ಸಾಥ್ ನೀಡುತ್ತಿದ್ದ, 31 ರನ್‌ಗಳಿಸಿದ್ದಾರೆ.

ಇತ್ತೀಚಿನ ವರದಿಗಳು ಬಂದಾಗ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ 5 ವಿಕೆಟ್ ನಷ್ಟಕ್ಕೆ 369ರನ್ ಗಳಿಸಿದೆ. ಭಾರತ ತಂಡ ನಾಯಕ ವಿರಾಟ್ ಕೊಹ್ಲಿ ಅವರು 115 ರನ್ ಗಳಿಸಿ ಮಿಚೆಲ್ ಜಾನ್ಸನ್ ಅವರಿಗೆ ವಿಕೆಟ್ ಒಪ್ಪಿಸಿದ್ದು, ವೃದ್ಧಿಮಾನ್ ಸಾಹಾ (1 ರನ್) ಮತ್ತು ಆರ್.ಶರ್ಮಾ (31 ರನ್) ಅವರು ಆಟ ಮುಂದುವರೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com