ಐಪಿಎಲ್ ಸ್ಪಾಟ್ ಫಿಕ್ಸಿಂಗ್: ಸುಂದರ್ ರಾಮನ್‌ಗೆ 'ಸುಪ್ರೀಂ' ತರಾಟೆ

ಬಿಸಿಸಿಐ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಸುಂದರ್ ರಾಮನ್ ಅವರನ್ನು ಸುಪ್ರೀಂಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.
ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಸುಂದರ್ ರಾಮನ್
ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಸುಂದರ್ ರಾಮನ್

ನವದೆಹಲಿ: ಬಿಸಿಸಿಐ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಸುಂದರ್ ರಾಮನ್ ಅವರನ್ನು ಸುಪ್ರೀಂಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಪ್ರಕರಣ ಕುರಿತು ನ್ಯಾ.ಮುದ್ಗಲ್ ಸಲ್ಲಿಸಿರುವ ತನಿಖಾ ವರದಿಯಲ್ಲಿ, ನಾಲ್ವರು ಆರೋಪಿಗಳ ಪೈಕಿ ಒಬ್ಬರಾಗಿರುವ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಸುಂದರ್ ರಾಮನ್ ಅವರನ್ನು ಸುಪ್ರೀಂಕೋರ್ಟ್ ಸೋಮವಾರ ತರಾಟೆಗೆ ತೆಗೆದುಕೊಂಡಿದೆ.

ಕ್ರೀಡೆಯ ಗಾಂಭೀರ್ಯ ಅರಿಯದೇ, ತಮಾಷೆ ನೋಡುತ್ತಿದ್ದೀರಿ. ಗಣ್ಯಾತಿಗಣ್ಯರ ಸೇವೆಯಲ್ಲಿಯೇ ತೊಡಗಿದ್ದಲ್ಲದೇ, ಸೆಲೆಬ್ರಿಟಿಗಳ ಹಿಂದೆ ಬಿದ್ದಿದ್ದೀರಿ. ಹಾಗಾಗಿ ಈ ಪ್ರಕರಣವನ್ನು ದಾಖಲಿಸಿಕೊಂಡು ಕ್ರಮ ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ತೋರಿದ್ದೀರಿ ಎಂದು ಸುಪ್ರೀಂ ತರಾಟೆಗೆ ತೆಗೆದುಕೊಂಡಿದೆ. ಮುದ್ಗಲ್ ವರದಿ ಬಗ್ಗೆ 'ಸುಪ್ರೀಂ' ಇಂದು ವಾದ ಪ್ರತಿವಾದವನ್ನು ಅಂತಿಮಗೊಳಿಸುವ ನಿರೀಕ್ಷೆ ಇದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com