2ನೇ ಟೆಸ್ಟ್: ಮುರಳಿ ವಿಜಯ್ ಶತಕ

ಆಸ್ಟ್ರೇಲಿಯದ ಬ್ರಿಸ್ಬೇನ್‌ನಲ್ಲಿ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯ ನಡುವಿನ 2ನೇ ಟೆಸ್ಟ್ ಪಂದ್ಯದಲ್ಲಿ ಮುರಳಿ ವಿಜಯ್ ಶತಕ ಸಿಡಿಸಿದ್ದಾರೆ.
ಮುರಳಿ ವಿಜಯ್(ಸಂಗ್ರಹ ಚಿತ್ರ)
ಮುರಳಿ ವಿಜಯ್(ಸಂಗ್ರಹ ಚಿತ್ರ)
Updated on: 

ಬ್ರಿಸ್ಬೇನ್: ಆಸ್ಟ್ರೇಲಿಯದ ಬ್ರಿಸ್ಬೇನ್‌ನಲ್ಲಿ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯ ನಡುವಿನ 2ನೇ ಟೆಸ್ಟ್ ಪಂದ್ಯದಲ್ಲಿ ಮುರಳಿ ವಿಜಯ್ ಶತಕ ಸಿಡಿಸಿದ್ದಾರೆ.

ಬ್ರಿಸ್ಬೇನ್‌ನ ಹುಲೋನ್‌ಗಬ್ಬ ಕ್ರೀಡಾಂಗಣದಲ್ಲಿ ದ್ವಿತೀಯ ಟೆಸ್ಟ್ ಪಂದ್ಯ ನಡೆಯುತ್ತಿದ್ದು, ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಭಾರತ ತಂಡ ಆಟಗಾರರು ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ.

ಆರಂಭಿಕರಾಗಿ ಕಣಕ್ಕೀಳಿದ ಮುರಳಿ ವಿಜಯ್ ಅಜೇಯ 135 ರನ್ ಗಳಿಸಿದ್ದು ಬಿಟ್ಟರೆ ಬೇರ್ಯಾರು 50 ರನ್ ಗಳಿಸಲಿಲ್ಲ. ಶಿಖರ್ ಧವನ್ ಕೇವಲ 24 ರನ್ ಗಳಿಸಿ ಔಟಾದರೆ, ಚೇತೇಶ್ವರ ಪೂಜಾರ್ 18 ರನ್‌ಗೆ ನಿರ್ಗಮಿಸಿದರು. ಬಳಿಕ ಬಂದ ಭರವಸೆಯ ಆಟಗಾರ ವಿರಾಟ್ ಕೊಹ್ಲಿ ಕೇವಲ 19 ರನ್ ಗಳಿಸಿ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದರು.

ಇದೀಗ ರಹಾನೆ ಹಾಗೂ ಮುರಳಿ ವಿಜಯ್ ಕಣದಲ್ಲಿದ್ದು, ರಹಾನೆ 40 ರನ್ ಗಳಿಸಿ ವಿಜಯ್‌ಗೆ ಸಾಥ್ ನೀಡುತ್ತಿದ್ದಾರೆ.

ಆಸ್ಟ್ರೇಲಿಯ ಪರ ಜೋಶ್ ಹ್ಯಾಜಲ್‌ವುಡ್ 2 ವಿಕೆಟ್ ಪಡೆದರೆ, ಮಿಚೆಲ್ ಮಾರ್ಶ್ 1 ವಿಕೆಟ್ ಪಡೆದಿದ್ದಾರೆ.

ಎರಡನೇ ಟೆಸ್ಟ್‌ಗಾಗಿ ಎರಡೂ ತಂಡಗಳಲ್ಲಿ ನಾಯಕತ್ವ ಬದಲಾಗಿದೆ. ಗಾಯದ ಸಮಸ್ಯೆಯಿಂದಾಗಿ ಧೋನಿ ಬದಲು ನಾಯಕನಾಗಿ ವಿರಾಟ್ ಕೊಹ್ಲಿ ಭಾರತವನ್ನು ಮುನ್ನಡೆಸಿದ್ದರು. ಈಗ ಧೋನಿ ಗುಣಮುಖರಾಗಿ ಎರಡನೇ ಟೆಸ್ಟ್‌ನಲ್ಲಿ ತಂಡವನ್ನು ಮುನ್ನಡೆಸುತ್ತಿದ್ದಾರೆ.

ಭಾರತ ಮೊದಲ ಇನ್ನಿಂಗ್ಸ್: 261/3


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com