ಕ್ರೀಡೆ

'ಪಂದ್ಯದಲ್ಲಿ ಜಯಕ್ಕೆ ಪ್ರಯತ್ನಿಸುತ್ತೇವೆ'

Published On :

ವೆಲ್ಲಿಂಗ್ಟನ್: ನ್ಯೂಜಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನ ಭಾರತ ತಂಡದ ನೀರಸ ಪ್ರದರ್ಶನವನ್ನು ಸಮರ್ಥಿಸಿಕೊಳ್ಳಲು ಪರದಾಡಿದ ಆರಂಭಿಕ ಬ್ಯಾಟ್ಸ್ಮನ್ ಶಿಖರ್ ಧವನ್, ಪಂದ್ಯದ ಅಂತಿಮ ದಿನ ಗೆಲವು ಸಾಧಿಸಲು ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ.
ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಎರಡನೇ ಇನಿಂಗ್ಸ್ನಲ್ಲಿ ಬ್ರೆಂಡನ್ ಮೆಕಲಂ ಹಾಗೂ ವಾಟ್ಲಿಂಗ್ ಅವರ ತ್ರಿಶತಕದ ಜತೆಯಾಟದ ನೇರವಿನಿಂದ ಭಾರತದ ವಿರುದ್ಧ 325 ರನ್ಗಳ ಮುನ್ನಡೆ ಸಾಧಿಸಿ, ಪಂದ್ಯದಲ್ಲಿ ನಿಯಂತ್ರಣ ಸಾಧಿಸಿದೆ.
ಪಂದ್ಯದಲ್ಲಿ ಇನ್ನು ಒಂದು ದಿನ ಬಾಕಿ ಇದೆ. ನಾವು ಸೋಲಿನ ಬಗ್ಗೆ ತಲೆ ಕೆಡಿಸಿಕೊಳ್ಳದೆ ಪಂದ್ಯವನ್ನು ಗೆಲ್ಲಲು ಪ್ರಯತ್ನಿಸುತ್ತೇವೆ. ಈ ಪಂದ್ಯದಲ್ಲಿ ನಾವು ಸಾಕಷ್ಟು ಅಂಶಗಳನ್ನು ಕಲಿತಿದ್ದೇವೆ. ಸದ್ಯದ ಪರಿಸ್ಥಿತಿಯಲ್ಲಿ ನಮಗೆ ನಿರಾಸೆಯಾಗಿದೆಯಾದರು, ಎದುರಾಳಿ ತಂಡವನ್ನು ಮೊದಲ ಇನಿಂಗ್ಸ್ನಲ್ಲಿ ಅಲ್ಪ ಮೊತ್ತಕ್ಕೆ ಕಟ್ಟಿಹಾಕುವ ಮೂಲಕ ಉತ್ತಮ ಕ್ರಿಕೆಟ್ ಆಡಿದ್ದೇವೆ ಎಂದು ಧವನ್ ತಿಳಿಸಿದ್ದಾರೆ.
ಮೊದಲ ಇನಿಂಗ್ಸ್ನಲ್ಲಿ ನಾವು ಕಠಿಣ ಪರಿಸ್ಥಿತಿಯಲ್ಲೂ ಉತ್ತಮ ರೀತಿಯಲ್ಲಿ ಬ್ಯಾಟಿಂಗ್ ನಡೆಸಿದ್ದೇವೆ. ಪಂದ್ಯದ ಮೂರನೇ ದಿನದವರೆಗೂ ನಾವು ಪಂದ್ಯದಲ್ಲಿ ಪ್ರಭುತ್ವ ಸಾಧಿಸಿದ್ದೆವು. ಆದರೆ ನಾಲ್ಕನೇ ದಿನದಾಟದಲ್ಲಿ ಪರಿಸ್ಥಿತಿ ಬದಲಾಗಿದೆ. ಆದಷ್ಟು ಬೇಗ ಎದುರಾಳಿ ತಂಡವನ್ನು ನಿಯಂತ್ರಿಸಿ, ಗುರಿಯ ಆಧಾರದ ಮೇಲೆ ನಾವು ಬ್ಯಾಟಿಂಗ್ ಮಾಡಲಿದ್ದೇವೆ ಎಂದು ಧವನ್ ಹೇಳಿದರು.
ಪಂದ್ಯ ಸಾಗಿದಂತೆ ಪಿಚ್ ಮಂದಗತಿಯಾಗಿದ್ದು, ಬ್ಯಾಟ್ಸ್ಮನ್ಗಳಿಗೆ ಅನುಕೂಲವಾಗಲಿದೆ. ಮೆಕಲಂ ಹಾಗೂ ವಾಟ್ಲಿಂಗ್ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.