ಟೆಸ್ಟ್ ರ್ಯಾಂಕಿಂಗ್: ಏರಿಕೆ ಕಂಡ ಕೊಹ್ಲಿ
ದುಬೈ: ನ್ಯೂಜಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಶತಕ ದಾಖಲಿಸುವ ಮೂಲಕ ಭಾರತ ತಂಡವನ್ನು ಸೋಲಿನಿಂದ ಪಾರು ಮಾಡಿದ ವಿರಾಟ್ ಕೊಹ್ಲಿ, ಟೆಸ್ಟ್ ರ್ಯಾಂಕಿಂಗ್ನಲ್ಲಿ ವೃತ್ತಿಜೀವನದ ಶ್ರೇಷ್ಠ ಸಾಧನೆ ಮಾಡಿದ್ದಾರೆ. ಬುಧವಾರ ಪ್ರಕಟವಾದ ಪರಿಷ್ಕೃತ ಟೆಸ್ಟ್ ಬ್ಯಾಟ್ಸ್ಮನ್ ರ್ಯಾಂಕಿಂಗ್ ಪಟ್ಟಿಯಲ್ಲಿ ಕೊಹ್ಲಿ 9ನೇ ಸ್ಥಾನಕ್ಕೇರಿದ್ದಾರೆ. ಉಳಿದಂತೆ ಆಸ್ಟ್ರೇಲಿಯಾದ ವೇಗಿ ಮಿಚೆಲ್ ಜಾನ್ಸನ್ ಬೌಲರ್ಗಳ ವಿಭಾಗದಲ್ಲಿ 5ನೇ ಸ್ಥಾನಕ್ಕೆ ಹಾಗೂ ನ್ಯೂಜಿಲೆಂಡ್ನ ಬ್ರೆಂಡನ್ ಮೆಕಲಂ ಸಹ ವೃತ್ತಿ ಜೀವನದ ಶ್ರೇಷ್ಠ ರ್ಯಾಂಕಿಂಗ್ 12ನೇ ಸ್ಥಾನ ಪಡೆದಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ನಾಲ್ಕು ಇನಿಂಗ್ಸ್ಗಳಿಂದ 214 ರನ್ ಕಲೆಹಾಕಿದ ವಿರಾಟ್ ಕೊಹ್ಲಿ, ವೃತ್ತಿ ಜೀವನದಲ್ಲಿ ಮೊದಲ ಬಾರಿಗೆ ಅಗ್ರ ಹತ್ತರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಕೊಹ್ಲಿ ಅಗ್ರ ಹತ್ತರ ಪಟ್ಟಿಯಲ್ಲಿ ಭಾರತ ತಂಡದ ಮತ್ತೊಬ್ಬ ಬ್ಯಾಟ್ಸ್ಮನ್ ಚೇತೇಶ್ವರ ಪೂಜಾರ ಜತೆಗೂಡಿದ್ದಾರೆ. ಇನ್ನು ಎರಡನೇ ಟೆಸ್ಟ್ ಪಂದ್ಯದಲ್ಲಿ ಶತಕ ದಾಖಲಿಸಿದ ಅಜಿಂಕ್ಯ ರಹಾನೆ, 15 ಸ್ಥಾನಗಳ ಏರಿಕೆ ಕಂಡಿದ್ದಾರೆ. ಈ ಮೂಲಕ ರಹಾನೆ 46ನೇ ಸ್ಥಾನ ಪಡೆದಿದ್ದಾರೆ. ಇನ್ನು ಕಿವೀಸ್ ಪ್ರವಾಸದಲ್ಲಿ ವೈಫಲ್ಯ ಅನುಭವಿಸಿದ ಪೂಜಾರ ಕುಸಿತ ಕಂಡಿದ್ದು, ಏಳನೇ ಸ್ಥಾನಕ್ಕೆ ಇಳಿದಿದ್ದಾರೆ. ಇನ್ನು ಬೌಲರ್ಗಳ ವಿಭಾಗದಲ್ಲಿ ಸ್ಪಿನ್ನರ್ ಆರ್.ಅಶ್ವಿನ್ ಎರಡು ಸ್ಥಾನ ಇಳಿಕೆ ಕಂಡಿದ್ದು, 10ನೇ ಸ್ಥಾನದಲ್ಲಿದ್ದಾರೆ. ಇನ್ನು ಪ್ರಗ್ಯಾನ್ ಓಜಾ 12ನೇ ಸ್ಥಾನದಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

