'ಭವಿಷ್ಯದ ಬಗ್ಗೆ ಜಹೀರ್ ಚಿಂತಿಸಲಿ'
ನವದೆಹಲಿ: ಭಾರತ ತಂಡ ಇದೇ ವರ್ಷಾಂತ್ಯದಲ್ಲಿ ಇಂಗ್ಲೆಂಡ್ ಪ್ರವಾಸ ಮಾಡಲಿದ್ದು, ಐದು ಟೆಸ್ಟ್ ಪಂದ್ಯಗಳ ಸರಣಿಯನ್ನಾಡಲಿದೆ. ಭಾರತ ತಂಡದ ಹಿರಿಯ ವೇಗಿ ಜಹೀರ್ ಖಾನ್ಗೆ ಕಠಿಣ ಸವಾಲು ಎದುರಾಗಲಿದೆ ಹಾಗಾಗಿ ಅವರು ತಮ್ಮ ಭವಿಷ್ಯದ ಬಗ್ಗೆ ಚಿಂತನೆ ನಡೆಸಬೇಕು ಎಂದು ಮಾಜಿ ನಾಯಕ ರಾಹುಲ್ ದ್ರಾವಿಡ್ ತಿಳಿಸಿದ್ದಾರೆ. ಗಾಯದ ಸಮಸ್ಯೆಗೆ ಸಿಲುಕಿ ಸುದೀರ್ಘ ಸಮಯದ ನಂತರ ದಕ್ಷಿಣ ಆಫ್ರಿಕಾ ಹಾಗೂ ನ್ಯೂಜಿಲೆಂಡ್ ಪ್ರವಾಸದಲ್ಲಿ ತಂಡಕ್ಕೆ ಮರಳಿದ ಜಹೀರ್, ತಮ್ಮ ಲಯವನ್ನು ಕಂಡುಕೊಂಡು ಎದುರಾಳಿ ಬ್ಯಾಟ್ಸ್ಮನ್ಗಳನ್ನು ಕಾಡುವಲ್ಲಿ ವಿಫಲರಾಗಿದ್ದಾರೆ. ಆದರೂ ಜಹೀರ್ ಕಿವೀಸ್ ವಿರುದ್ಧ ದ್ವಿತೀಯ ಟೆಸ್ಟ್ನ ಎರಡನೇ ಇನಿಂಗ್ಸ್ನಲ್ಲಿ 51 ಓವರ್ ಮಾಡಿ 5 ವಿಕೆಟ್ ಪಡೆದಿದ್ದಾರೆ. ಜಹೀರ್ ಖಾನ್ ಇಂಗ್ಲೆಂಡ್ ಪ್ರವಾಸದಲ್ಲಿ ಯಶಸ್ವಿಯಾಗುವರೇ? ನನಗಂತೂ ನಂಬಿಕೆ ಇಲ್ಲ ಎಂದು ದ್ರಾವಿಡ್ ಅಭಿಪ್ರಾಯಪಟ್ಟಿದ್ದಾರೆ.
ಜಹೀರ್ ಖಾನ್ ತಮ್ಮ ಸಾಮರ್ಥ್ಯದ ಬಗ್ಗೆ ತಮ್ಮಷ್ಟಕ್ಕೆ ತಾವೇ ಪ್ರಶ್ನಿಸಿಕೊಳ್ಳಬೇಕಿದೆ. ಜಹೀರ್ ಖಾನ್ ಬೇರೆಯವರಂತೆ ತಮ್ಮ ಅಂತ್ಯವನ್ನು ನಿರಾಶಾದಾಯಕವಾಗಿ ಅಂತ್ಯಗೊಳಿಸಲು ಇಚ್ಛಿಸುವುದಿಲ್ಲ. ಆದರೆ ಇದರಿಂದ ಹೊರಬರುವುದು ಕಷ್ಟ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

