ಕ್ರೀಡೆ

ಪಾಕ್‌ಗೆ ಆಫ್ಘಾನ್ ಸವಾಲು

Published On :

ಫಾತುಲ್ಹಾ: ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಗೆಲವಿನ ಹೊಸ್ತಿಲಲ್ಲಿ ಮುಗ್ಗರಿಸಿದ ಪಾಕಿಸ್ತಾನ ತಂಡ ಏಷ್ಯಾಕಪ್‌ನ ತನ್ನ ಎರಡನೇ ಪಂದ್ಯದಲ್ಲಿ ದುರ್ಬಲ ಅಫ್ಘಾನಿಸ್ತಾನವನ್ನು ಎದುರಿಸಲಿದೆ.
ಗುರುವಾರ ಖಾನ್ ಸಾಹೇಬ್ ಒಸ್ಮಾನ್ ಅಲಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಪಾಕಿಸ್ತಾನ ತಂಡ ಅಫ್ಘಾನಿಸ್ತಾನ ವಿರುದ್ಧ ಗೆಲವು ದಾಖಲಿಸಿ, ಜಯದ ಹಾದಿಗೆ ಮರಳಲು ಎದುರು ನೋಡುತ್ತಿದೆ.
ಪಾಕಿಸ್ತಾನ ತಂಡ ಪಂದ್ಯಾವಳಿಯ ಉದ್ಘಾಟನಾ ಪಂದ್ಯಾವಳಿಯಲ್ಲಿ ಶ್ರೀಲಂಕಾ ವಿರುದ್ಧ ಉತ್ತಮ ನಿಯಂತ್ರಣ ಸಾಧಿಸಿತಾದರೂ ಅಂತಿಮ ಘಟ್ಟದಲ್ಲಿ ಎಚ್ಚರ ತಪ್ಪಿದ ಪರಿಣಾಮ ಸೋಲನುಭವಿಸಬೇಕಾಯಿತು.
ಹಾಲಿ ಚಾಂಪಿಯನ್ ಆಗಿ ಕಣಕ್ಕಿಳಿದಿರುವ ಪಾಕಿಸ್ತಾನಕ್ಕೆ ಮೊದಲ ಪಂದ್ಯದಲ್ಲಿನ ಸೋಲು ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಹಾಗಾಗಿ ಮತ್ತೆ ಜಯದ ಹಾದಿಗೆ ಮರಳಲು ಪಾಕಿಸ್ತಾನಕ್ಕೆ ಈ ಪಂದ್ಯ ಉತ್ತಮ ವೇದಿಕೆಯಾಗಿದೆ.
ತಂಡದಲ್ಲಿ ಮಿಸ್ಬಾ ಉಲ್ ಹಕ್, ಮಹಮದ್ ಅಫೀಜ್, ಅಹ್ಮದ್ ಶೆಹಜಾದ್, ಶಾಹಿದ್ ಅಫ್ರೀದಿ, ಉಮರ್ ಅಕ್ಮಲ್‌ರಂತಹ ಉತ್ತಮ ಬ್ಯಾಟ್ಸ್‌ಮನ್‌ಗಳಿದ್ದಾರೆ. ಇನ್ನು ಬೌಲಿಂಗ್ ವಿಭಾಗದಲ್ಲಿ ಉಮರ್ ಗುಲ್, ಜುನೈದ್ ಖಾನ್, ಸಯೀದ್ ಅಜ್ಮಲ್‌ರಂತಹ ಮಾರಕ ಬೌಲರ್‌ಗಳಿದ್ದಾರೆ.
ಇನ್ನು ಅಫ್ಘಾನಿಸ್ತಾನ ತಂಡ ಇದೇ ಮೊದಲ ಬಾರಿಗೆ ಏಷ್ಯಾಕಪ್‌ನಲ್ಲಿ ಭಾಗವಹಿಸುತ್ತಿದ್ದು, ಅಚ್ಚರಿಯ ಪ್ರದರ್ಶನ ನೀಡಲು ಕಾತರವಾಗಿದೆ. ಇನ್ನು ಅಫ್ಘಾನಿಸ್ತಾನದ ನಾಯಕ ಮಹಮದ್ ನಬಿ ಬಾಂಗ್ಲಾದೇಶದ ಸ್ಥಳೀಯ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಆಡಿರುವ ಅನುಭವ ಹೊಂದಿದ್ದು, ಪಿಚ್‌ನ ವಾತಾವರಣವನ್ನು ತಿಳಿದಿರುವ ವಿಶ್ವಾದಲ್ಲಿದ್ದಾರೆ.
ಒಟ್ಟಿನಲ್ಲಿ ಈ ಪಂದ್ಯ ಉಭಯ ತಂಡಗಳಿಗೂ ಮಹತ್ವದ್ದಾಗಿದ್ದು, ಯಾವ ತಂಡ ಗೆಲವು ದಾಖಲಿಸಲಿದೆ ಎಂಬುದನ್ನು ಕಾದು ನೋಡಬೇಕು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.