ಗೆದ್ದ ಭಾರತಕ್ಕೆ 5ನೇ ಸ್ಥಾನ
ಶಾರ್ಜಾ: ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗದಲ್ಲಿ ಸಂಘಟಿತ ದಾಳಿ ನಡೆಸಿದ ಭಾರತ ತಂಡ 19 ವರ್ಷದೊಳಗಿನ ಕಿರಿಯರ ವಿಶ್ವಕಪ್ ಪಂದ್ಯಾವಳಿಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಗೆಲವು ದಾಖಲಿಸಿದೆ.
ಗುರುವಾರ ಇಲ್ಲಿನ ಶಾರ್ಜಾ ಕ್ರಿಕೆಟ್ ಮೈದಾನದಲ್ಲಿ 5ನೇ ಸ್ಥಾನಕ್ಕಾಗಿ ನಡೆದ ಪ್ಲೇ ಆಫ್ ಪಂದ್ಯದಲ್ಲಿ ಭಾರತ ತಂಡ 46 ರನ್ಗಳ ಅಂತರದಿಂದ ವೆಸ್ಟ್ ಇಂಡೀಸ್ ತಂಡವನ್ನು ಮಣಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ 50 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 340 ರನ್ ದಾಖಲಿಸಿತು. ಈ ಮೊತ್ತವನ್ನು ಬೆನ್ನಟ್ಟಿದ ವೆಸ್ಟ್ ಇಂಡೀಸ್ ತಂಡ 50 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 294 ರನ್ಗಳನಷ್ಟೇ ಗಳಿಸಲು ಶಕ್ತವಾಯಿತು.
ಸಂಘಟಿತ ಬ್ಯಾಟಿಂಗ್: ಮೊದಲು ಬ್ಯಾಟಿಂಗ್ ಮಾಡಲು ಕಣಕ್ಕಿಳಿದ ಭಾರತ ತಂಡಕ್ಕೆ ಆರಂಭಿಕರಾದ ಅಂಕುಶ್ ಬೈನ್ಸ್(74) ಹಾಗೂ ಅಖಿಲ್ ಹೆರ್ವಾಡ್ಕರ್(27) 70 ರನ್ಗಳ ಉತ್ತಮ ಆರಂಭ ನೀಡಿದರು. ಈ ಇಬ್ಬರು ಬ್ಯಾಟ್ಸ್ಮನ್ಗಳು ಔಟಾದ ನಂತರ ಬಂದ ವಿಜಯ್ ಜೋಲ್ 30 ರನ್ಗಳಿಸಿ ಉತ್ತಮ ಆರಂಭ ಪಡೆದರಾದರೂ, ಬೃಹತ್ ಇನಿಂಗ್ಸ್ ಆಡುವಲ್ಲಿ ವಿಫಲರಾದರು. ನಂತರ ಬಂದ ಸಂಜು ಸ್ಯಾಮ್ಸನ್(67), ಶ್ರೇಯಸ್ ಐಯ್ಯರ್(66) ಹಾಗೂ ದೀಪಕ್ ಹೂಡ(42) ಸ್ಫೋಟಕ ಬ್ಯಾಟಿಂಗ್ ನಡೆಸಿದರು. ಹಾಗಾಗಿ ಯಾವುದೇ ಆಟಗಾರ ಶತಕ ದಾಖಲಿಸದಿದ್ದರೂ ತಂಡ 340 ರನ್ಗಳ ಬೃಹತ್ ಮೊತ್ತ ಪೇರಿಸಿತು. ವೆಸ್ಟ್ ಇಂಡೀಸ್ ತಂಡದ ಪರ ಮೋಟಿ ಕನಾಯ್ 3 ಹಾಗೂ ಪ್ರೆಸ್ಟೊನ್ ಮೆಕ್ಸ್ವೀನ್ 2 ವಿಕೆಟ್ ಪಡೆದರು.
ವ್ಯರ್ಥವಾದ ಶತಕ: ಭಾರತ ನೀಡಿದ ಬೃಹತ್ ಮೊತ್ತವನ್ನು ಬೆನ್ನಟ್ಟಿದ ವೆಸ್ಟ್ ಇಂಡೀಸ್ ತಂಡದ ಪರ ಕೆಚ್ಚೆದೆಯ ಹೋರಾಟ ನಡೆಸಿದ್ದು, ಆರಂಭಿಕ ಬ್ಯಾಟ್ಸ್ಮನ್ ತ್ಯಾಗಿನಾರಾಯಣ ಚಂದ್ರಪಾಲ್(112).ಕೇವಲ 2 ರನ್ಗಳಿಗೆ ಮತ್ತೊಬ್ಬ ಆರಂಭಿಕ ಶಿಮ್ರೊನ್ ಹೆಟ್ಮೇರ್ ವಿಕೆಟ್ ಕಳೆದುಕೊಂಡ ವೆಸ್ಟ್ ಇಂಡೀಸ್ ಆರಂಭಿಕ ಆಘಾತ ನಡೆಸಿತು.
ಈ ವೇಳೆ ಜತೆಯಾದ ಚಂದ್ರಪಾಲ್ ಹಾಗೂ ಟ್ರಿಸ್ಟನ್ ಕೋಲ್ಮನ್(45) ಎರಡನೇ ವಿಕೆಟ್ಗೆ ಅರ್ಧಶತಕದ ಜತೆಯಾಟ ನಡೆಸಿದರು. ಚಂದ್ರಪಾಲ್ 136 ಎಸೆತಗಳನ್ನು ಎದುರಿಸಿ, 8 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 112 ರನ್ ದಾಖಲಿಸಿದರು. ನಂತರ ವಿಜಯ್ ಜೋಲ್ ಎಸೆತದಲ್ಲಿ ಎಲ್ಬಿ ಬಲೆಗೆ ಬಿದ್ದ ಚಂದ್ರಪಾಲ್ ತಮ್ಮ ಅಮೋಘ ಇನಿಂಗ್ಸ್ ಅಂತ್ಯಗೊಳಿಸಿದರು. ಚಂದ್ರಪಾಲ್ಗೆ ಉತ್ತಮ ಸಾಥ್ ನೀಡಿದ ನಿಕೊಲಸ್ ಪೂರನ್(54) ಅರ್ಧಶತಕ ದಾಖಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

