ಕ್ರೀಡೆ

ಬಾಸ್ಕೆಟ್‌ಬಾಲ್: ರಾಜ್ಯಕ್ಕೆ ಗೆಲವು

Published On :

ನವದೆಹಲಿ: ಉತ್ತಮ ಪ್ರದರ್ಶನ ಮುಂದುವರಿಸಿರುವ ಕರ್ನಾಟಕ ತಂಡದ ಆಟಗಾರರು 64ನೇ ರಾಷ್ಟ್ರೀಯ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ವಿರುದ್ಧ ಗೆಲವು ದಾಖಲಿಸಿದೆ.
ಗುರುವಾರ ಇಲ್ಲಿನ ತ್ಯಾಗರಾಜ ಕ್ರೀಡಾ ಸಂಕೀರ್ಣದಲ್ಲಿ ನಡೆದ ಮೂರನೇ ಪಂದ್ಯದಲ್ಲಿ ಕರ್ನಾಟಕ ತಂಡ 99-66 (26-14, 23-13, 25-21, 25-18) ಅಂಕಗಳ ಅಂತರದಲ್ಲಿ ಜಮ್ಮು ಮತ್ತು ಕಾಶ್ಮೀರ ತಂಡವನ್ನು ಮಣಿಸಿದೆ.
ಕರ್ನಾಟಕ ತಂಡದ ಪರ ಅರವಿಂದ 22, ರಾಜೇಶ್ ಪಿ ಉಪ್ಪಾನ್ 18, ವಿಶು 18, ಅನಿಲ್ ಕುಮಾರ್ 14, ಸಂಜಯ್ ರಾಜ್ 11 ಅಂಕಗಳನ್ನು ದಾಖಲಿಸುವ ಮೂಲಕ ಗೆಲವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.
ಇನ್ನು ಜಮ್ಮು ಮತ್ತು ಕಾಶ್ಮೀರಪರ ಇಕ್ಬಾಲ್ ಸಿಂಗ್ 20, ರಣಿವ್ ಸಿಂಗ್ 13, ಕರಣ್ ಕುಮಾರ್ 12, ಶುಭಂ ಶರ್ಮಾ 12 ಅಂಕಗಳಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.