ಕ್ರೀಡೆ

ಫೆಡರರ್ ಮುಂದಡಿ ಶರಪೋವಾ ಪತನ

Published On :

ಲಂಡನ್: ಸ್ವಿಜರ್ಲೆಂಡ್‌ನ ಮಾಜಿ ನಂಬರ್ ಒನ್ ಆಟಗಾರ ರೋಜರ್ ಫೆಡರರ್ ಗೆಲವಿನ ಹಾದಿಯಲ್ಲಿ ಮುಂದುವರಿದಿದ್ದು, ವಿಂಬಲ್ಡನ್ ಗ್ರ್ಯಾನ್ ಸ್ಲಾಮ್ ಟೆನಿಸ್ ಟೂರ್ನಿಯಲ್ಲಿ  ಕ್ವಾರ್ಟರ್‌ಫೈನಲ್ ತಲುಪಿದ್ದಾರೆ.
ಮಂಗಳವಾರ ನಡೆದ ಪುರುಷರ ಸಿಂಗಲ್ಸ್ ವಿಭಾಗದ ನಾಲ್ಕನೇ ಸುತ್ತಿನ ಪಂದ್ಯದಲ್ಲಿ ರೋಜರ್ ಫೆಡರರ್ 6-1, 6-4, 6-4 ನೇರ ಸೆಟ್‌ಗಳ ಅಂತರದಲ್ಲಿ ತಮ್ಮ ಎದುರಾಳಿ ಸ್ಪೇನ್‌ನ ಟಾಮಿ ರಾಬ್ರೆಡೊ ಅವರನ್ನು ಮಣಿಸಿದ್ದಾರೆ.
ಪಂದ್ಯದ ಆರಂಭದಿಂದಲೂ ಎದುರಾಳಿಯ ಮೇಲೆ ತಮ್ಮ ಪ್ರಾಬಲ್ಯ ಮೆರೆದ ಫೆಡರರ್, ಪಂದ್ಯದ ಯಾವುದೇ ಹಂತದಲ್ಲೂ ಎದುರಾಳಿಗೆ ಚೇತರಿಸಿಕೊಳ್ಳಲು ಅವಕಾಶ ನೀಡಲಿಲ್ಲ.
ಮಹಿಳೆಯರ ಸಿಂಗಲ್ಸ್ ನಾಲ್ಕನೇ ಸುತ್ತಿನ ಪಂದ್ಯದಲ್ಲಿ ರಷ್ಯಾದ ಟೆನಿಸ್ ತಾರೆ ಮಾರಿಯಾ ಶರಪೋವಾ 6-7 (4-7), 6-4, 4-6 ಸೆಟ್‌ಗಳ ಅಂತರದಲ್ಲಿ ಜರ್ಮನಿಯ ಆ್ಯಂಜೆಲಿಕ್ ಕರ್ಬರ್ ವಿರುದ್ಧ ಪರಾಭವಗೊಂಡಿದ್ದಾರೆ.
ಪುರುಷರ ಸಿಂಗಲ್ಸ್ ವಿಭಾಗದ ಮತ್ತೊಂದು ಪಂದ್ಯದಲ್ಲಿ ಸ್ವಿಜರ್ಲೆಂಡ್‌ನ ಸ್ಟಾನಿಸ್ಲಾಸ್ ವಾವ್ರಿಂಕಾ 7-6 (7-5), 7-6 (9-7), 6-3 ಸೆಟ್‌ಗಳ ಅಂತರದಲ್ಲಿ ಸ್ಪೇನ್‌ನ ಫೆಲಿಸಿಯಾನೊ ಲೊಪೆಜ್ ವಿರುದ್ಧ ಪ್ರಯಾಸದ ಗೆಲವು ದಾಖಲಿಸಿದ್ದಾರೆ.
ಇನ್ನು ಪುರುಷರ ಡಬಲ್ಸ್ ವಿಭಾಗದಲ್ಲಿ ಭಾರತದ ರೋಹನ್ ಬೋಪಣ್ಣ ಹಾಗೂ ಪಾಕಿಸ್ತಾನದ ಐಸಾಮುಲ್ ಹಕ್ ಖುರೇಷಿ ಜೋಡಿಯು ಕೆನಡಾದ ವಾಸೆಕ್ ಪೊಸ್ಪಿಸಿಲ್ ಹಾಗೂ ಅಮೆರಿಕಾದ ಜಾಕ್ ಸೋಕ್ ಜೋಡಿ ಎದುರು 7-6 (7-3), 6-7 (5-7), 3-6, 6-4, 5-7 ಸೆಟ್‌ಗಳ ಅಂತರದಲ್ಲಿ ಮಣಿದಿದೆ.
ಇನ್ನು ಸೋಮವಾರ ತಡರಾತ್ರಿ ನಡೆದ ನಾಲ್ಕನೇ ಸುತ್ತಿನ ಪಂದ್ಯದಲ್ಲಿ, ಸರ್ಬಿಯಾದ ನೊವಾಕ್ ಜೋಕೊವಿಚ್ ತಮ್ಮ ಎದುರಾಳಿ ಜೊ ವಿಲ್‌ಫ್ರೆಡ್ ಸೋಂಗಾ ವಿರುದ್ಧ 6-3, 6-4, 7-6 (7-5) ಸೆಟ್‌ಗಳಿಂದ ಗೆಲವು ದಾಖಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.