ಕ್ರೀಡೆ

ಮೊದಲ ಟೆಸ್ಟ್‌ಗೆ ಆಂಗ್ಲರ ತಂಡ ಪ್ರಕಟ

ಮೊದಲ ಟೆಸ್ಟ್‌ಗೆ ಆಂಗ್ಲರ ತಂಡ ಪ್ರಕಟ
Published On :

ಲಂಡನ್: ಭಾರತ ವಿರುದ್ಧ ಐದು ಟೆಸ್ಟ್ ಪಂದ್ಯಗಳ ಸರಣಿಯ ಮೊದಲ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ತಂಡವನ್ನು ಪ್ರಕಟಿಸಲಾಗಿದ್ದು, ಆಲ್ರೌಂಡರ್ ಬೆನ್ ಸ್ಟೋಕ್ಸ್ ಮತ್ತೆ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಇಂಗ್ಲೆಂಡ್ ತಂಡದ ಆಯ್ಕೆಗಾರರು ಬುಧವಾರ 13 ಆಟಗಾರರ ತಂಡವನ್ನು ಪ್ರಕಟಿಸಿದ್ದು, ಜು.9ರಿಂದ ಟ್ರೆಂಟ್ ಬ್ರಿಡ್ಜ್‌ನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಅಲಸ್ಟೆರ್ ಕುಕ್ ಸಾರಥ್ಯ ವಹಿಸಲಿದ್ದಾರೆ.
ಕಳೆದ ವರ್ಷ ಇಂಗ್ಲೆಂಡ್ ತಂಡಕ್ಕೆ ಪದಾರ್ಪಣೆ ಮಾಡಿದ್ದ ಸ್ಟೋಕ್ಸ್, ಮುಂಗೈ ಗಾಯದಿಂದ ತಂಡದಿಂದ ಹೊರಗುಳಿದಿದ್ದರು. ಈಗ ಮತ್ತೆ ಭಾರತದ ವಿರುದ್ಧ ತಂಡಕ್ಕೆ ಮರು ಸೇರ್ಪಡೆಯಾಗಿದ್ದಾರೆ.
ಉಳಿದಂತೆ ಇಯಾನ್ ಬೆಲ್, ಸ್ಯಾಮ್ ರಾಬ್‌ಸನ್, ಗ್ಯಾರಿ ಬ್ಯಾಲೆನ್ಸ್, ಜೋ ರೂಟ್ ತಂಡದ ಬ್ಯಾಟಿಂಗ್ ಆಧಾರವಾದರೆ, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆ್ಯಂಡರ್‌ಸನ್, ಲಿಯಾಮ್ ಪ್ಲಕೆಂಟ್ ಬೌಲಿಂಗ್ ಅಸ್ತ್ರವಾಗಿದ್ದಾರೆ.
ಇಂಗ್ಲೆಂಡ್ ತಂಡ: ಅಲಸ್ಟೆರ್ ಕುಕ್ (ನಾಯಕ), ಮೋಯಿನ್ ಅಲಿ, ಜೇಮ್ಸ್ ಆ್ಯಂಡರ್‌ಸನ್, ಇಯಾನ್ ಬೆಲ್, ಸ್ಯಾಮ್ ರಾಬ್‌ಸನ್, ಗ್ಯಾರಿ ಬ್ಯಾಲೆನ್ಸ್, ಜೋ ರೂಟ್, ಕ್ರಿಸ್ ಜೋರ್ಡಾನ್, ಸ್ಟುವರ್ಟ್ ಬ್ರಾಡ್, ಲಿಯಾಮ್ ಪ್ಲಕೆಂಟ್, ಮ್ಯಾಟ್ ಪ್ರಯರ್, ಬೆನ್ ಸ್ಟೋಕ್ಸ್, ಕ್ರಿಸ್ ವೋಕ್ಸ್.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.