ಟೀಂ ಇಂಡಿಯಾಕ್ಕೆ ಧೋನಿ ಸಮರ್ಥ ಸಾರಥಿ: ರಾಹುಲ್ ದ್ರಾವಿಡ್

ನವದೆಹಲಿ: ಭಾರತ ಕ್ರಿಕೆಟ್ ತಂಡ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಸಾರಥ್ಯದಲ್ಲಿ ಅತ್ಯುತ್ತಮವಾಗಿ ಸಾಗುತ್ತಿದ್ದು, ಇತ್ತೀಚೆಗೆ ಆಸೀಸ್ ಮಾಜಿ ನಾಯಕ ಇಯಾನ್ ಚಾಪೆಲ್ ಹೆಳಿದಂತೆ ಭಾರತ ತಂಡದ ನಾಯಕತ್ವದಲ್ಲಿ ಬದಲಾವಣೆ ಬೇಕಿಲ್ಲ ಎಂದು ಮಾಜಿ ನಾಯಕ ರಾಹುಲ್ ದ್ರಾವಿಡ್ ಹೇಳಿದ್ದಾರೆ. ಧೋನಿ ನಾಯಕತ್ವದಲ್ಲಿ ಭಾರತ ತಂಡ ಉತ್ತಮ ಹಾದಿಯಲ್ಲಿ ಸಾಗುತ್ತಿದೆ. ಪ್ರಸ್ತುತ ಸಂದರ್ಭದಲ್ಲಿ ಧೋನಿ ಭಾರತಕ್ಕೆ ಸಮರ್ಥ ನಾಯಕನಾಗಿದ್ದಾರೆ. ಸಾಕಷ್ಟು ಜನ ಭಾರತ ತಂಡ ಕಳೆದ ಬಾರಿ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾದಲ್ಲಿನ ಸೋಲಿನ ಬಗ್ಗೆಯೇ ಮಾತನಾಡುತ್ತಿದ್ದಾರೆ. ಈಗ ಧೋನಿ ತಂಡದಲ್ಲಿ ಯುವ ಆಟಗಾರರನ್ನು ಹೊಂದಿದ್ದು, ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇನ್ನು ವಿರಾಟ್ ಕೊಹ್ಲಿಗೆ ನಾಯಕತ್ವ ನೀಡಲು ಸಾಕಷ್ಟು ಸಮಯಾವಕಾಶವಿದೆ. ಆ ಸಮಯ ಮುಂದಿನ ದಿನಗಳಲ್ಲಿ ಬರಲಿದೆ ಎಂದು ದ್ರಾವಿಡ್ ಅಭಿಪ್ರಾಯಪಟ್ಟಿದ್ದಾರೆ.
ಸ್ಟುವರ್ಟ್ ಬಿನ್ನಿ ತಾವು ಅಂತಾರಾಷ್ಟ್ರೀಯ ಮಟ್ಟದ ಆಟಗಾರ ಎಂಬುದನ್ನು ಸಾಬೀತು ಮಾಡಿದ್ದಾರೆ. ಕೆಲವುರು ಬಿನ್ನಿ ಉತ್ತಮವಾಗಿ ಬೌಲಿಂಗ್ ಮಾಡಲಿಲ್ಲ ಎಂಬ ಹೇಳಿಕೆ ನೀಡಿದ್ದಾರೆ. ಏಕೆಂದರೆ ಪಿಚ್ ಬಿನ್ನಿಗೆ ಸೂಕ್ತವಾಗಿರಲಿಲ್ಲ. ನನ್ನ ಪ್ರಕಾರ ಲಾರ್ಡ್ಸ್ನಲ್ಲಿ ಬಿನ್ನಿ ಉತ್ತಮ ಅವಕಾಶ ಪಡೆಯಲಿದ್ದಾರೆ ಎಂದು ದ್ರಾವಿಡ್ ವಿಶ್ವಾಸ ವ್ಯಕ್ತಪಡಿಸಿದರು.
ಲಾರ್ಡ್ಸ್ನಲ್ಲಿ ಭಾರತ ವಿಭಿನ್ನ ಸವಾಲನ್ನು ಎದುರಿಸಬೇಕಾಗುತ್ತದೆ. ಈ ಪಿಚ್ನಲ್ಲಿ ಬೌಲರ್ಗಳ ಪಾತ್ರ ಮಹತ್ವದ್ದಾಗಿರುತ್ತದೆ. ಹಾಗಾಗಿ ಕುತೂಹಲದಿಂದ ಪಂದ್ಯವನ್ನು ನಿರೀಕ್ಷಿಸುತ್ತಿದ್ದೇನೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


