ಕ್ರೀಡೆ

ಬಾಕ್ಸರ್‌ಗಳಿಗೆ ಅಗ್ನಿ ಪರೀಕ್ಷೆ

Published On :

ಗ್ಲಾಸ್ಗೊ: ಕಳೆದ ಬಾರಿಯ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಭಾರತೀಯ ಬಾಕ್ಸರ್‌ಗಳು, ಮತ್ತೆ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಲು ತಯಾರಾಗಿದ್ದಾರೆ. ಹಾಗಾಗಿ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಬಾಕ್ಸರ್‌ಗಳು ಶುಕ್ರವಾರದಿಂದ ಅಗ್ನಿ ಪರೀಕ್ಷೆಯನ್ನು ಎದುರಿಸಲಿದ್ದಾರೆ.
ಕಳೆದ ಬಾರಿಯ ದೆಹಲಿ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ತವರು ಅಭಿಮಾನಿಗಳ ಬೆಂಬಲದೊಂದಿಗೆ 3 ಚಿನ್ನ, 4 ಕಂಚು ಸೇರಿದಂತೆ ಒಟ್ಟು 7 ಪದಕಗಳನ್ನು ಬಾಚಿಕೊಂಡಿದ್ದ ಭಾರತ, ಈ ಬಾರಿಯೂ ಅದೇ ರೀತಿಯ ಉತ್ತಮ ಪ್ರದರ್ಶನ ನೀಡಲು ಎದುರು ನೋಡುತ್ತಿದೆ. ಈ ಬಾರಿ ಆಡಳಿತ ಅಧಿಕಾರಿಗಳ ಗೊಂದಲದಿಂದ ಭಾರತೀಯ ಬಾಕ್ಸಿಂಗ್ ಸಂಸ್ಥೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಅನರ್ಹಗೊಳಿಸಿರುವುದು. ಆಟಗಾರನ್ನು ಒತ್ತಡಕ್ಕೆ ಸಿಲುಕಿಸಿದೆ. ಅಲ್ಲದೆ ಸದ್ಯದ ಮಟ್ಟಿಗೆ ಭಾರತೀಯ ಬಾಕ್ಸಿಂಗ್ ಸಂಸ್ಥೆಯ ಸಮಸ್ಯೆಗೆ ಪರಿಹಾರ ದೊರೆಯುವ ಯಾವುದೇ ಲಕ್ಷಣಗಳು ಗೋಚರಿಸುತ್ತಿಲ್ಲ. ಬಾಕ್ಸಿಂಗ್ ಪಡೆಯಲ್ಲಿ 7 ಪುರುಷ ಹಾಗೂ 3 ಮಹಿಳಾ ಬಾಕ್ಸರ್‌ಗಳಿದ್ದು, ಪದಕದ ಬೇಟೆಯಾಡಲು ಸಜ್ಜಾಗಿದ್ದಾರೆ. ಈ ತಂಡದಲ್ಲಿ ಪುರುಷರ ವಿಭಾಗದಲ್ಲಿ ಮನೋಜ್ ಕುಮಾರ್ (64 ಕೆ.ಜಿ) ಹಾಗೂ ಒಲಿಂಪಿಯನ್ ವಿಜೇಂದ್ರ ಸಿಂಗ್ (75 ಕೆ.ಜಿ) ಕಳೆದ ಆವೃತ್ತಿಯಲ್ಲಿ ಪದಕ ಗೆದ್ದಿದ್ದ ಬಾಕ್ಸರ್‌ಗಳಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.